ಅನುದಾನ ಬಳಕೆ ಆಗದಿದ್ದರೆ ಅಧಿಕಾರಿಗಳ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್ಚರಿಕೆ

 

 

ಡಿಜಿಟಲ್ ಕನ್ನಡ ಟೀಮ್

ಪ್ರಮುಖ ಕಾರ್ಯಕ್ರಮಗಳಿಗೆ ನಿಗದಿ ಮಾಡಿರುವ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಬಳಕೆ ಮಾಡಿಕೊಳ್ಳದಿದ್ದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ಅನುದಾನ ಬಳಕೆಗೆ ಮೂರು ತಿಂಗಳ ಗುರಿ ನಿಗದಿಪಡಿಸುವುದರ ಜತೆಗೆ ಕ್ರಿಯಾಯೋಜನೆ ರೂಪಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.

ಜನರ ಅನುಕೂಲಕ್ಕಾಗಿ ಸರಕಾರ ನಾನಾ ಯೋಜನೆಗಳನ್ನು ರೂಪಿಸಿ, ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಿದೆ. ಅದರ ಸಮರ್ಪಕ ಬಳಕೆ ಕೆಳ ಹಂತದ ಅಧಿಕಾರಿಗಳ ಕರ್ತವ್ಯ. ಈ ಕರ್ತವ್ಯಪಾಲನೆ ಬಗ್ಗೆ ನಿಗಾ ವಹಿಸುವುದು ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಜವಾಬ್ದಾರಿ. ಈ ವಿಷಯದಲ್ಲಿ ಲೋಪ ಸಹಿಸುವುದಿಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದದರು.

Leave a Reply