ಡಿಜಿಟಲ್ ಕನ್ನಡ ಟೀಮ್:
ಆಧುನಿಕ ತಂತ್ರಜ್ಞಾನದ ಮೂಲಕ ಸಾಹಸ ಸಿಂಹ ವಿಷ್ಣುವರ್ಧನ್ ಅವರನ್ನು ಸಿನಿಮಾದಲ್ಲಿ ಮರುಸೃಷ್ಟಿ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದ ನಾಗರಹಾವು ಚಿತ್ರ ಈ ವಾರ ತೆರೆಗೆ ಬರಲು ತಯಾರಾಗಿದೆ. ಈ ಚಿತ್ರದಲ್ಲಿ ಮೋಹಕ ತಾರೆ ರಮ್ಯಾ ನಾಗಿಣಿ ವೇಷದಲ್ಲಿ ಕಾಣಿಸಿಕೊಂಡಿರುವುದೂ ಸಹ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದಲ್ಲಿ ಡಾ.ವಿಷ್ಣುವರ್ಧನ್ ಅವರನ್ನು ಗ್ರಾಫಿಕ್ಸ್ ಮೂಲಕ ಮರುಸೃಷ್ಟಿ ಮಾಡಿರುವ ಚಿತ್ರ ಹೀಗಿದೆ…
ತಮ್ಮ ಮೂವರು ಹೆಣ್ಣು ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್, ಯಾನಾ ಚಿತ್ರವನ್ನು ಸಿದ್ಧಗೊಳಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯಲಕ್ಷ್ಮಿ ಸಿಂಗ್ ಅವರ ಮೂವರು ಹೆಣ್ಣು ಮಕ್ಕಳಾದ ವೈಭವಿ, ವೈನಿಧಿ ಮತ್ತು ವೈಸಿರಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇವರಿಗೆ ಚಕ್ರವರ್ತಿ, ಸುಮುಖ ಹಾಗೂ ಅಭಿಶೇಕ್ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಫೋಟೊಶೂಟ್ ಇಲ್ಲಿದೆ…
ಬಾಯಿಲ್ಡ್ ಬೀನ್ಸ್ ಪಿಕ್ಚರ್ ಸಂಸ್ಥೆ ಅಡಿಯಲ್ಲಿ ತಯಾರಾಗುತ್ತಿರುವ ಕಹಿ ಚಿತ್ರ ಬಹುತೇಕ ಪೂರ್ಣಗೊಂಡಿದ್ದು, ಸೆನ್ಸಾರ್ ಮಂಡಳಿ ಪರೀಕ್ಷೆಗೆ ಸಿದ್ಧವಾಗಿದೆ. ಹರಿಶರ್ವಾ ಮತ್ತು ಕೃಷಿ ತಾಪಂಡ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಚಿತ್ರದ ಫೋಟೊಗಳು ಇಲ್ಲಿವೆ…