ಲಾಲ್ ಬಾಗ್ ಪುಷ್ಪ ಪ್ರದರ್ಶನ ಹೇಗಿದೆ ಗೊತ್ತಾ? ಇಲ್ಲಿವೆ ನೋಡಿ ಚಿತ್ರಪಟಗಳು

ಬೆಂಗಳೂರಿನ ಲಾಲ್ ಬಾಗ್ ಉದ್ಯಾನವನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ ಪುಷ್ಪ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಗೋಲ್ ಗುಂಬಜ್ ಪುಷ್ಪಾಕೃತಿ.

ಡಿಜಿಟಲ್ ಕನ್ನಡ ಟೀಮ್:

ಪ್ರತಿ ವರ್ಷದಂತೆ ಈ ವರ್ಷವೂ ಸಹ ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಭಾಗ್ ಉದ್ಯನವನದಲ್ಲಿ ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶುಕ್ರವಾರ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಜಿ. ಪದ್ಮಾವತಿ ಈ ಪುಷ್ಪ ಪ್ರದರ್ಶನವನ್ನು ಉದ್ಘಾಟನೆ ಮಾಡಿದರು. ಈ ಬಾರಿ ಗೋಲ್ ಗುಂಬಜ್ ಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದ್ದು, ಇದರ ಜತೆಗೆ ವಿವಿಧ ಪುಷ್ಪಾಕೃತಿಗಳು ಪ್ರೇಕ್ಷಕರ ಮನ ಸೆಳೆಯುತ್ತಿದೆ. ಈ ಪುಷ್ಪಪ್ರದರ್ಶನ ಹೇಗಿದೆ ಎಂಬುದನ್ನು ಈ ಚಿತ್ರಗಳಲ್ಲಿ ನೋಡಿ ಕಣ್ತುಂಬಿಕೊಳ್ಳಿ…

lalbagh3-min

ಪುಷ್ಪ ಪ್ರದರ್ಶನ ಉದ್ಘಾಟಿಸಿದ ನಂತರ ಕ್ಯಾಮೆರಾ ಹಿಡಿದು ಫೋಟೊ ಕ್ಲಿಕ್ಕಿಸುತ್ತಿರುವ ಬಿಬಿಎಂಪಿ ಮೇಯರ್ ಪದ್ಮಾವತಿ.

lalbagh-1-min

ಪುಷ್ಪ ಪ್ರದರ್ಶನ ವೀಕ್ಷಿಸಲು ಬಂದ ಮಹಿಳೆಯರು ಸೆಲ್ಫಿ ತೆಗೆದುಕೊಳ್ಳುತ್ತಿರುವುದು.

lalbagh-2-min

ವಿಭಿನ್ನ ಬಗೆಯ ಅಪರೂಪದ ಹೂಗಳನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿಯುತ್ತಿರುವುದು.

lalbagh-4-min

lalbagh-7-min

lalbagh-8-min

lalbagh-6-min

ಪುಷ್ಪ ಪ್ರದರ್ಶನದಲ್ಲಿ ನೋಡುಗರನ್ನು ಆಕರ್ಷಿಸುತ್ತಿರುವ ಹೂವಿನಿಂದ ನಿರ್ಮಿಸಲಾಗಿರುವ ಚಿಟ್ಟೆ, ಆನೆ, ಜಿರಾಫೆ ಹಾಗೂ ಪಕ್ಷಿಯ ಆಕೃತಿಗಳು…

Leave a Reply