ವಿದ್ಯಾರ್ಥಿಗಳ ಅನುಕೂಲಕ್ಕೆ ಆನ್ ಲೈನಲ್ಲಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ

ಡಿಜಿಟಲ್ ಕನ್ನಡ ಟೀಮ್:

ಪಿಯುಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಮಾದರಿ ಉತ್ತರ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.

ಇದುವರೆಗೂ ಪರೀಕ್ಷೆ ಮುಗಿದ ಮರುದಿನವೇ ಮಾದರಿ ಉತ್ತರ ಪತ್ರಿಕೆ ಬಿಡುಗಡೆ ಮಾಡಿದ ನಿದರ್ಶನವಿಲ್ಲ. ಸಾಮಾನ್ಯವಾಗಿ ಫಲಿತಾಂಶ ಪ್ರಕಟಗೊಂಡ ಬಳಿಕ ಯಾವುದಾದರು ಗೊಂದಲವಿದ್ದರೆ ಮಾತ್ರ ಮಾದರಿ ಉತ್ತರ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು. ಇದೀಗ ಮಂಡಳಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಅನುಕೂಲ ಕಲ್ಪಿಸಲೆಂದು ಇಂದಿನಿಂದಲೇ ವೆಬ್ ಸೈಟ್ ನಲ್ಲಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ತಾವು ಬರೆದಿರುವ ಪರೀಕ್ಷೆಯಲ್ಲಿ ಗೊಂದಲವಿದ್ದರೆ ಬಗೆಹರಿಸಿಕೊಳ್ಳಬಹುದು. ಅಲ್ಲದೆ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲೇ ಆಕ್ಷೇಪಣೆ ಸಲ್ಲಿಸುವ ಅವಕಾಶ ಮಾಡಿಕೊಡಲಾಗಿದೆ.

ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗ ಸೇರಿದಂತೆ ಒಟ್ಟು 34 ವಿಷಯಗಳ ಕುರಿತಾಗಿ ವೆಬ್ ಸೈಟ್ ನಲ್ಲಿ ಸ್ಕೀಮ್ ಆಫ್ ಇವ್ಯಾಲ್ಯುಯೇಷನ್ ಬಿಡುಗಡೆ ಮಾಡಲಾಗಿದೆ ಎಂದು ಮಂಡಳಿಯು ತಿಳಿಸಿದೆ.

Leave a Reply