ಬಸ್ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿರ್ಧಾರ?

ಡಿಜಿಟಲ್ ಕನ್ನಡ ಟೀಮ್:

ಸತತ ಡೀಸೆಲ್ ದರ ಹೆಚ್ಚಳ, ನೋಟು ಅಮಾನ್ಯದಿಂದ ಸಂಸ್ಥೆಗೆ ಆಗಿರುವ ನಷ್ಟದ ಕಾರಣಗಳನ್ನು ನೀಡುತ್ತಾ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣದ ದರವನ್ನು ಹೆಚ್ಚಿಸಲು ಮುಂದಾಗಿದೆ. ಈ ಸಂಬಂಧ ಪ್ರಯಾಣ ದರ ಪರಿಷ್ಕರಿಸುವಂತೆ ಸಾರಿಗೆ ಸಂಸ್ಥೆ ಸರ್ಕಾರವನ್ನು ಕೋರಿದ್ದು, ಆ ಮೂಲಕ ಪ್ರಯಾಣಿಕರ ಜೇಬಿಗೆ ಹೊರೆ ಹಾಕಲು ನಿರ್ಧರಿಸಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿರುವುದಿಷ್ಟು…

‘ದರ ಪರಿಷ್ಕರಣೆಗಾಗಿ ಸಾರಿಗೆ ನಿಗಮ ಸರ್ಕಾರಕ್ಕೆ ಮನವಿ ಮಾಡಿದೆ. ಈ ಪರಿಷ್ಕರಣೆಯಿಂದ ಪ್ರಯಾಣಿಕರ ಮೇಲೆ ಹೊರೆ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು. ಈ ಬಗ್ಗೆ ಯಾವುದೇನಿರ್ಧಾರ ಕೈಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ಸಮಾಲೋಚನೆ ನಡೆಸಿದ ನಂತರ ಪರಿಷ್ಕರಣೆ ಬಗ್ಗೆ ಸರ್ಕಾರ ತನ್ನ ನಿರ್ಧಾರ ಕೈಗೊಳ್ಳಲಿದೆ. ಇನ್ನು ಲಾರಿ ಮುಷ್ಕರಕ್ಕೆ ಸಂಬಂಧಿಸಿದಂತೆ ಲಾರಿ ಮಾಲೀಕರ ಜತೆ ಸಭೆ ಮಾಡಿದ್ದೇನೆ. ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಉಳಿದ ಬೇಡಿಕೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದ್ದು, ಹೈದರಾಬಾದಿನಲ್ಲಿ ನಡೆಯುವ ಲಾರಿ ಮಾಲೀಕರ ಸಭೆ ನಿರ್ಧಾರ ಈ ಬಗ್ಗೆ ಸ್ಪಷ್ಟ ಚಿತ್ರಣ ನೀಡಲಿದೆ. ರಾಜ್ಯದಲ್ಲಿ ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಲು ಮುಷ್ಕರ ಕೈಬಿಡುವಂತೆ ಮನವಿ ಮಾಡಲಾಗಿದೆ.’

Leave a Reply