ಅಂಗನವಾಡಿ ಕಾರ್ಯಕರ್ತೆಯರಿಗೆ- ಸಹಾಯಕಿಯರಿಗೆ ಸರ್ಕಾರ ಹೆಚ್ಚಿಸಿದ ಗೌರವಧನ ಎಷ್ಟು?

ಡಿಜಿಟಲ್ ಕನ್ನಡ ಟೀಮ್:

ಇತತೀಚೆಗೆ ರಾಜ್ಯ ರಾಜಧಾನಿಯಲ್ಲಿ ಹಗಲಿರುಳು ನಡುರಸ್ತೆಯಲ್ಲಿ ಕೂತು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ಅಂಗವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ರಾಷ್ಟ್ರವ್ಯಾಪ್ತಿ ಚರ್ಚೆಯಾಗಿತ್ತು. ಸರ್ಕಾರ ಈಗ ಅವರಿಗೆ ಗೌರವಧನವನ್ನು ಹೆಚ್ಚಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ₹ 1 ಸಾವಿರ ಹಾಗೂ ಸಹಾಯಕಿಯರಿಗೆ ₹ 500 ಹೆಚ್ಚಿಸಿದೆ.

ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತರ ಸಂಘಟನೆ ಜತೆ ವಿಧಾನಸೌಧದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಷರತ್ತುಗಳ ಆಧಾರದ ಮೇಲೆ ಗೌರವ ಧನ ಹೆಚ್ಚಿಸಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು ಹೇಳಿದಿಷ್ಟು…

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸಲಾಗಿದೆ. ಯಾವಾಗಿನಿಂದ ಈ ವೇತನ ಹೆಚ್ಚಳವಾಗಲಿದೆ ಎಂಬುದನ್ನು ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಈಗಾಗಲೇ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಪ್ರಮಾಣವನ್ನು ಒಂದು ಸಾವಿರ ಹಾಗೂ ಸಹಾಯಕಿಯರಿಗೆ ಐನೂರು ಹೆಚ್ಚಳ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಇದನ್ನು ಮತ್ತಷ್ಟು ಹೆಚ್ಚಳ ಮಾಡಬೇಕು ಎಂದು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹೋರಾಟ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ಈಗ ಘೋಷಿಸಿರುವ ಗೌರವಧನದ ಜತೆಗೆ ಹೆಚ್ಚುವರಿಯಾಗಿ ಕಾರ್ಯಕರ್ತೆಯರಿಗೆ ಒಂದು ಸಾವಿರ ಹಾಗೂ ಸಹಾಯಕಿಯರಿಗೆ ಐನೂರು ರು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನದ ಪ್ರಮಾಣ ಮಾಸಿಕ ₹ 8 ಸಾವಿರ ಹಾಗೂ ಸಹಾಯಕಿಯರ ಗೌರವ ಧನ ಪ್ರಮಾಣ ₹ 4 ಸಾವಿರಕ್ಕೆ ಹೆಚ್ಚಲಿದೆ. ಇದು ಕೇಂದ್ರ ಸರ್ಕಾರದ ಯೋಜನೆ. ಇದರಲ್ಲಿ ಹೆಚ್ಚಿನ ಪಾಲು ಕೇಂದ್ರದ್ದಾಗಿದೆ. ಆದರೆ ಅದರ ಪಾಲು ಕಡಿಮೆಯಾಗಿದೆ. ಹೀಗಾಗಿ ನಾವೇ ಹೆಚ್ಚಿನ ಹೊರ ಹೊರಬೇಕಾಗಿದೆ. ಇದರೊಂದಿಗೆ ಈ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿದಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ವೇತನ ₹4650 ಹೆಚ್ಚಿದೆ.’

Leave a Reply