ನಿರ್ಭಯ ಅತ್ಯಾಚಾರ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಡಿಜಿಟಲ್ ಕನ್ನಡ ಟೀಮ್:

ಇಡೀ ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನಿರ್ಭಯ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯನ್ನು ಖಾಯಂಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

2012ರ ಡಿಸೆಂಬರ್ 16ರಂದು 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶವೇ ತಲೆತಗ್ಗಿಸುವಂತೆ ಮಾಡಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈ ಕೋರ್ಟ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ ಮುಖೇಶ್(27), ಪವನ್ (20), ವಿನಯ್ (21) ಹಾಗೂ ಅಕ್ಷಯ್ (29) ವಿರುದ್ಧ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಈ ನಾಲ್ವರು ಮೇಲ್ಮನವಿ ಸಲ್ಲಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ಈ ಅರ್ಜಿಯ ವಿಚಾರಣೆಯ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಕೆಳ ಹಂತದ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿತು. ಸುಪ್ರೀಂ ಕೋರ್ಟಿನ ತೀರ್ಪು ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದಲ್ಲಿ ಹಾಜರಾಗಿದ್ದವರೆಲ್ಲರೂ ಚಪ್ಪಾಳೆ ತಟ್ಟುವ ಮೂಲಕ ತೀರ್ಪನ್ನು ಸ್ವಾಗತಿಸಿದರು.

ಪ್ರಕರಣದ ಐದನೇ ಆರೋಪಿ ರಾಮ್ ಸಿಂಗ್ ಎಂಬಾತ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆರನೇ ಆರೋಪಿ ಅಪ್ರಾಪ್ತನಾಗಿದ್ದ ಹಿನ್ನೆಲೆಯಲ್ಲಿ 3 ವರ್ಷ ಜೈಲು ಶಿಕ್ಷೆ ಅನುಭವಿಸಿ 2015ರ ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದಾನೆ.

Leave a Reply