ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ, ತಂಡದಲ್ಲಿರುವವರು ಯಾರು?

ಡಿಜಿಟಲ್ ಕನ್ನಡ ಟೀಮ್:

ಆಧಾಯ ಹಂಚಿಕೆ ವಿಷಯವಾಗಿ ಐಸಿಸಿ ಮತ್ತು ಬಿಸಿಸಿಐ ನಡುವಣ ಹಗ್ಗಜಗ್ಗಾಟದ ನಡುವೆಯು ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಸಭೆ ನಡೆಸಿದ ಆಯ್ಕೆ ಸಮಿತಿ 15 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಗಾಯದ ಸಮಸ್ಯೆಯಿಂದ ಗುಣಮುಖರಾಗಿರುವ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಹಾಗೂ ವೇಗಿ ಮೊಹಮದ್ ಶಮಿ ತಂಡಕ್ಕೆ ಮರಳಿದ್ದಾರೆ.

ಜೂನ್ 1ರಿಂದ ಇಂಗ್ಲೆಂಡಿನಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆರಂಭವಾಗಲಿದ್ದು, ಭಾರತ ತಂಡ ಜೂನ್ 4ರಂದು ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ನಂತರ ಜೂನ್ 8ರಂದು ಶ್ರೀಲಂಕಾ ವಿರುದ್ಧ, ಜೂನ್ 11ರಂದು ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ. ಜೂನ್ 14 ಮತ್ತು 15 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಜೂನ್ 18ರಂದು ಫೈನಲ್ ಪಂದ್ಯ ನಡೆಯಲಿದೆ.

ಭಾರತದ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಮನೀಷ್ ಪಾಂಡೆ, ಮೊಹಮದ್ ಶಮಿ.

Leave a Reply