ಮೇ 11ಕ್ಕೆ ಪಿಯುಸಿ, ಮೇ 12ಕ್ಕೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ

ಡಿಜಿಟಲ್ ಕನ್ನಡ ಟೀಮ್:

ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸೆಲ್ಸಿ ಪರೀಕ್ಷಾ ಫಲಿತಾಂಶ ಕ್ರಮವಾಗಿ ಮೇ 11 ಮತ್ತು 12 ರಂದು ಪ್ರಕಟಗೊಳ್ಳಲಿದೆ. ಈ ವಿಷಯವಾಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ‘ಸಿಇಟಿ ಹಾಗೂ ನೀಟ್ ಪರೀಕ್ಷೆಗಳು ಪೂರ್ಣಗೊಂಡ ನಂತರ ಫಲಿತಾಂಶ ಪ್ರಕಟಗೊಳ್ಳುವ ನಿರ್ಧಾರ ಕೈಗೊಳ್ಳಲಾಗಿತ್ತು. ಎಸ್ಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸಲು ಸಿದ್ಧಗೊಂಡಿವೆ. ಈ ವರ್ಷ ದ್ವಿತೀಯ ಪಿಯುಸಿಯಲ್ಲಿ 6.84.490 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು’ ಎಂದರು.

ಸಚಿವರ ಜತೆ ಚರ್ಚೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೇ 11ರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ನಂತರ 12 ರಂದು ಕಾಲೇಜುಗಳಲ್ಲಿ ಪ್ರಕಟಿಸಲಾಗುವುದು ಎಂದರು. ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ಕೇವಲ  www.puc.kar.nic.in ವೆಬ್ ಸೈಟಿನಲ್ಲಿ ಮಾತ್ರ ಪ್ರಕಟಿಸಲಾಗುವುದು. ಇನ್ನು 10ನೇ ತರಗತಿ ಪರೀಕ್ಷಾ ಫಲಿತಾಂಶ ಮೇ 12ರಂದು ವೆಬ್ ಸೈಟ್ ಗಳಲ್ಲಿ ಪ್ರಕಟವಾಗಲಿದೆ. ಈ ಬಾರಿ ರಾಜ್ಯಾದ್ಯಂತ ಒಟ್ಟು 8.77.174 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ

Leave a Reply