ಶಿವಕುಮಾರಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ

ಡಿಜಿಟಲ್ ಕನ್ನಡ ಟೀಮ್:

ಆರೋಗ್ಯದಲ್ಲಿನ ಏರುಪೇರಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ತುಮಕೂರಿನ ಮಠಕ್ಕೆ ತೆರಳಿದರು.

ಶಿವಕುಮಾರಸ್ವಾಮೀಜಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವೈದ್ಯರು, ‘ಪಿತ್ತನಾಳದ ಸೋಂಕಿನಿಂದ ಆದ ಜ್ವರದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಂಡೋಸ್ಕೋಪಿಕ್ ಚಿಕಿತ್ಸೆ ನೀಡಲಾಗಿದೆ. ಈಗ ಅವರು ಚೇತರಿಸಿಕೊಂಡಿದ್ದು, ಡಿಸ್ ಚಾರ್ಜ್ ಮಾಡಲಾಗಿದೆ. ಅವರಿಗೆ ಮಠದಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುವುದು’ ಎಂದರು.

Leave a Reply