ಐಸಿಯುನಲ್ಲಿ ಪಾರ್ವತಮ್ಮ ರಾಜ್ ಕುಮಾರ್, ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರು ಕೊಟ್ಟ ಮಾಹಿತಿ ಏನು?

ಡಿಜಿಟಲ್ ಕನ್ನಡ ಟೀಮ್:

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮನವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಎಂ.ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

‘ನಿನ್ನೆ ರಾತ್ರಿ ಪಾರ್ವತಮ್ಮನವರಿಗೆ ಉಸಿರಾಟದಲ್ಲಿ ಏರುಪೇರಾಗಿತ್ತು. ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ನೀಡಲಾಗಿದೆ. ಕಿಡ್ನಿಯೂ ಸಹ ಸ್ವಲ್ಪ ಮಟ್ಟಿಗೆ ವೈಫಲ್ಯವಾಗಿದ್ದು, ಡಯಾಲಿಸಿಸ್ ಮಾಡುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮುಂದಿನ 24ರಿಂದ 48 ಗಂಟೆಗಳವರೆಗೂ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗುವುದು’ ಎಂದು ಎಂ.ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ವೇಳೆ ಮಾತನಾಡಿದ ಶಿವರಾಜ್ ಕುಮಾರ್, ‘ಸದ್ಯಕ್ಕೆ ಅಮ್ಮನ ಆರೋಗ್ಯ ಗಂಭೀರವಾಗಿದೆ. ಅವರನ್ನು ಐಸಿಯುನಲ್ಲಿ ಇಟ್ಟಿರುವುದರಿಂದ ಅವರು ತುಂಬಾ ಚೆನ್ನಾಗಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟಿರುವುದರಿಂದ ನಮಗೂ ಆತಂಕ ಇದೆ. ಅವರು ವೆಂಟಿಲೇಟರ್ ನಿಂದ ಆಚೆ ಬಂದರೆ ಮತ್ತೆ ಸಹಜ ಸ್ಥಿತಿಗೆ ಮರಳಲಿದ್ದಾರೆ. ಆದರೆ ಸದ್ಯಕ್ಕೆ ಯಾವುದೇ ಅಪಾಯ ಇಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ವದಂತಿಗಳು ಹರಿದಾಡಿರುವುದರಿಂದ ಪೊಲೀಸ್ ಭದ್ರತೆ ನೀಡಲಾಗಿದೆ. ಹೀಗಾಗಿ ಇದನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳಬಾರದು. ಈ ಕುರಿತು ಆಗಾಗ್ಗೆ ಮಾಹಿತಿಯನ್ನು ನೀಡಲಾಗುವುದು’ ಎಂದರು.

Leave a Reply