ಅರವಿಂದ್ ಕೇಜ್ರಿವಾಲ್ ವಿರುದ್ಧ ಅರುಣ್ ಜೇಟ್ಲಿ ಮತ್ತೆ ₹ 10 ಕೋಟಿಗೆ ಮಾನನಷ್ಟ ಮೊಕದ್ದಮೆ ಹೂಡಿದ್ದೇಕೆ ಗೊತ್ತಾ?

ಡಿಜಿಟಲ್ ಕನ್ನಡ ಟೀಮ್:

ಅರವಿಂದ ಕೇಜ್ರಿವಾಲ್ ಪರ ವಕೀಲರಾದ ರಾಮ್ ಜೇಠ್ಮಲಾನಿ ಅವರು ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಕೇಂದ್ರ ಸಚಿವ ಅರುಣ್ ಜೇಟ್ಲಿ ಮತ್ತೊಮ್ಮೆ ₹ 10 ಕೋಟಿ ಪರಿಹಾರಕ್ಕಾಗಿ ದೆಹಲಿ ಮುಖ್ಯಮಂತ್ರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಅರುಣ್ ಜೇಟ್ಲಿ ಅವರು ಈಗಾಗಲೇ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ನ್ಯಾಯಾಲಯದಲ್ಲಿ ಆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಮತ್ತೊಂದು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮೇ 15 ಹಾಗು 17 ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ರಾಮ್ ಜೇಠ್ಮಲಾನಿ ಅವರು ಕೆಲವು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬುದು ಜೇಟ್ಲಿ ಆರೋಪವಾಗಿದೆ. ಹೀಗಾಗಿ ಮತ್ತೆ ಜೇಟ್ಲಿ ಅವರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ₹ 10 ಕೋಟಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಈಗಾಗಲೇ ಜೇಟ್ಲಿ ವಿರುದ್ಧದ ಕಾನೂನು ಸಮರದಲ್ಲಿ ಹೋರಾಡಲು ದೆಹಲಿ ಸರ್ಕಾರದ ಖಜಾನೆಯ ಹಣವನ್ನೇ ಬಳಸುತ್ತಿರುವ ಕೇಜ್ರಿವಾಲ್, ಈಗ ಎದುರಾಗಿರುವ ಮತ್ತೊಂದು ಪ್ರಕರಣಕ್ಕೂ ಜನರ ದುಡ್ಡನ್ನೇ ಖರ್ಚು ಮಾಡುತ್ತಾರಾ ಎಂಬ ಪ್ರಶ್ನೆಗಳು ಜನರಲ್ಲಿ ಮೂಡಿವೆ.

Leave a Reply