ಸಿಬಿಎಸ್ಇ ಫಲಿತಾಂಶ ವಿಳಂಬ- ಸಿಇಟಿ ಫಲಿತಾಂಶ ಸಹ ಮುಂದೂಡಿಕೆ

ಡಿಜಿಟಲ್ ಕನ್ನಡ ಟೀಮ್:

ಎರಡು ದಿನಗಳ ಹಿಂದೆಯೇ ಪ್ರಕಟವಾಗಬೇಕಿದ್ದ ಸಿಬಿಎಸ್ಇ ಹನ್ನೆರಡನೇ ತರಗತಿಯ ಫಲಿತಾಂಶವು ವಿಳಂಬವಾದ ಕಾರಣ ಕರ್ನಾಟಕ ಸಿಇಟಿ ಫಲಿತಾಂಶ ಕೂಡ ಮುಂದೂಡಲ್ಪಟ್ಟಿದೆ.

2017ರ ಸಿಇಟಿ ಫಲಿತಾಂಶವನ್ನು ಮೇ 27ರಂದು ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಳಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಆದರೆ ಸಿಬಿಎಸ್ಇಯ ಫಲಿತಾಂಶ ಪ್ರಕಟವಾಗದಿರುವ ಹಿನ್ನೆಲೆಯಲ್ಲಿ ಮೇ 30 ರಂದು ಸಿಇಟಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ‘ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಹಾಗೂ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷನ (ಐಸಿಎಸ್ ಸಿ) ಮಾನ್ಯತೆ ಹೊಂದಿರುವ ಕಾಲೇಜುಗಳಲ್ಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ತಡವಾಗಿವೆ.

ಸಿಬಿಎಸ್ಇ ಹಾಗೂ ಐಸಿಎಸ್ಇ ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬವಾಗಿರುವ ಕಾರಣ, ಸಿಇಟಿ ಫಲಿತಾಂಶವನ್ನೂ ಮುಂದೂಡುವ ಅನಿವಾರ್ಯತೆ ಉಂಟಾಗಿದೆ. ಸಿಬಿಎಸ್ಇ ಹಾಗೂ ಐಸಿಎಸ್ಇ ಫಲಿತಾಂಶದ ಮೊದಲೇ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದರೆ, ವಿದ್ಯಾರ್ಥಿಗಳಿಗೆ ಹಾಗೂ ಪ್ರಾಧಿಕಾರಕ್ಕೆ ಗೊಂದಲ ಉಂಟಾಗಲಿದೆ. ಹೀಗಾಗಿ 3 ದಿನ ಕಾಯಲು ನಿರ್ಧರಿಸಲಾಗಿದೆ. ಸಿಇಟಿ ಪರೀಕ್ಷಾ ಫಲಿತಾಂಶ ದಿನವನ್ನು ಮೊದಲೇ ಸಿಬಿಎಸ್ಇ ಹಾಗೂ ಐಸಿಎಸ್ಇಗೆ ಪ್ರಾಧಿಕಾರ ತಿಳಿಸುತ್ತಿದೆ. ಆದರೆ, ನಮ್ಮ ಮಾತನ್ನು ಪದೇ ಪದೆ ಅವರು ನಿರ್ಲಕ್ಷಿಸುತ್ತಿದ್ದಾರೆ. ಕೆಲ ವರ್ಷಗಳಿಂದಲೂ ಇದೇ ರೀತಿ ಸಿಇಟಿ ಫಲಿತಾಂಶವನ್ನು ಮುಂದೂಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ’ ಎಂದು ಹೇಳಿದ್ದಾರೆ.

Leave a Reply