ಜಂತಕಲ್ ಅಕ್ರಮ ಗಣಿಕಾರಿಕೆ ಪ್ರಕರಣ: ಕುಮಾರಸ್ವಾಮಿ ಜಾಮೀನು ಅವಧಿ ವಿಸ್ತರಣೆ

ಡಿಜಿಟಲ್ ಕನ್ನಡ ಟೀಮ್:

ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟು ಜಾಮೀನು ಪಡೆದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಸೆಷನ್ ನ್ಯಾಯಾಲಯದಿಂದ ಸಿಹಿ ಸುದ್ದಿ ಸಿಕ್ಕಿದೆ. ಅದೇನೆಂದರೆ ನ್ಯಾಯಾಲಯ ಹೆಚ್ಡಿಕೆ ಅವರಿಗೆ ನೀಡಿರುವ ಜಾಮೀನಿನ ಅವಧಿಯನ್ನು ಮುಂದಿನ ಜೂ.5ರವರೆಗೂ ವಿಸ್ತರಣೆ ಮಾಡಿದೆ.

ಪ್ರಕರಣದಲ್ಲಿ ಕುಮಾರಸ್ವಾಮಿ ಆರೋಪಿಯಾಗಿರುವ ಕಾರಣ, ಈ ಹಿಂದೆ ಅವರು ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ನ್ಯಾಯಾಲಯ ಎರಡು ಬಾರಿ ಅವರಿಗೆ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದ್ದು, ಈಗ ಮತ್ತೊಮ್ಮೆ ವಿಸ್ತರಣೆ ಮಾಡಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾದಳ(ಎಸ್ಐಟಿ) ವಿಚಾರಣೆ ವೇಳೆ ತಮ್ಮನ್ನು ಬಂಧಿಸಬಹುದೆಂಬ ಕಾರಣಕ್ಕಾಗಿ ಕುಮಾರಸ್ವಾಮಿ ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಕಳೆದ ಬಾರಿ ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ ಪ್ರಕರಣ ಕುರಿತಂತೆ ತನಿಖಾಧಿಕಾರಿಗಳು ಮುಂದಿಟ್ಟಿದ್ದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದರು. ಈಗ ಮತ್ತೆ ಜಾಮೀನು ಅವಧಿ ವಿಸ್ತರಣೆಯಾಗಿರುವುದರಿಂದ ಕುಮಾರಸ್ವಾಮಿ ಅವರಿಗೆ ರಿಲೀಫ್ ಮುಂದುವರಿದಂತಾಗಿದೆ.

Leave a Reply