ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್ ಬೆಂಗಳೂರಲ್ಲಿ ಮತಯಾಚನೆ

ಡಿಜಿಟಲ್ ಕನ್ನಡ ಟೀಮ್
ಬುಧವಾರ ಬೆಂಗಳೂರಿಗೆ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಭೇಟಿ ನೀಡಿ ಮತ ಯಾಚಿಸಿದ್ರು.
ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಸಂಸದರು ಪಾಲ್ಗೊಂಡಿದ್ರು.
ಮಾಜಿ ಮುಖ್ಯಮಂತ್ರಿಗಳು ಹಾಗು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರು ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿ, ರಾಷ್ಟ್ರಪತಿ ಹುದ್ದೆಗೆ ಸಮರ್ಥ ಅಭ್ಯರ್ಥಿ ಎಂದರು.
ಕೋವಿಂದ್ ಅವರ ನಾಮಪತ್ರಕ್ಕೆ ಸೂಚಕರಾಗಿ ತಾವೇ ಸಹಿ ಹಾಕಿದ್ದು ಎಲ್ಲರೂ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸೋಣ ಎಂದು ಕೋರಿದರು.
ಈ ವೇಳೆ ಬಿಎಸ್ ಎಸ್ ಆರ್ ಪಕ್ಷದಿಂದ ಶಾಸಕರಾದ ಕುಡುಚಿ ರಾಜೀವ್ ಮತ್ತಿತರ ಶಾಸಕರು ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹಾಜರಿದ್ದಿದ್ದು ವಿಶೇಷವಾಗಿತ್ತು.

Leave a Reply