ಇಂದಿರಾ ಕ್ಯಾಂಟೀನ್ ಆರಂಭ: ನೀವು ತಿಳಿಯಬೇಕಿರುವ ಪ್ರಮುಖ ಅಂಶಗಳೇನು?

ಡಿಜಿಟಲ್ ಕನ್ನಡ ಟೀಮ್:

ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ‘ಇಂದಿರಾ ಕ್ಯಾಂಟೀನ್’ ಅನ್ನು ಬುಧವಾರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ಘಾಟಿಸಿದರು.

ಬಡವರಿಗೆ ಕಡಿಮೆ ದರದಲ್ಲಿ ಊಟ ಸಿಗಬೇಕು ಎಂಬ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇಂದು ಜಯನಗರದ ಕನಕನಪಾಳ್ಯದಲ್ಲಿನ ಇಂದಿರಾ ಕ್ಯಾಂಟೀನ್ ಅನ್ನು ರಾಹುಲ್ ಗಾಂಧಿ ಉದ್ಘಾಟಿಸಿದರು. ರಾಹುಲ್ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪ್ರಮುಖ ನಾಯಕರುಗಳಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಬಿಬಿಎಂಪಿ ಮೇಯರ್ ಪದ್ಮಾವತಿ ಇದ್ದರು. ಈ ಇಂದಿರಾ ಕ್ಯಾಂಟೀನ್ ಕುರಿತಾಗಿ ನೀವು ತಿಳಿಯಬೇಕಿರುವ ಪ್ರಮುಖ ಅಂಶಗಳು ಹೀಗಿವೆ…

  • ಬೆಂಗಳೂರು ಮಹಾನಗರ ಪಾಲಿಕೆಯ ಎಲ್ಲ ವಾರ್ಡುಗಳಲ್ಲಿಯೂ ಕ್ಯಾಂಟೀನ್ ಆರಂಭಿಸಲಾಗುತ್ತಿದ್ದು, ಈ ಯೋಜನೆಯ ಮೊದಲ ಹಂತವಾಗಿ ಈಗ 101 ವಾರ್ಡುಗಳಲ್ಲಿ ಕ್ಯಾಂಟೀನ್ ಆರಂಭಿಸಲಾಗಿದೆ.
  • ಅಕ್ಟೋಬರ್ ವೇಳೆಗೆ ಎಲ್ಲಾ 198 ವಾರ್ಡುಗಳಲ್ಲಿ ಇಂದಿರಾ ಕ್ಯಂಟೀನ್ ಆರಂಭಿಸಲಾಗುವುದು.
  • ಈ ಕ್ಯಾಂಟೀನ್ ನಲ್ಲಿ ₹5ಕ್ಕೆ ತಿಂಡಿ, ₹ 10ಕ್ಕೆ ಊಟ ಸಿಗಲಿದೆ.
  • ಕ್ಯಾಂಟೀನ್ ಉದ್ಘಾಟನೆಯ ನಂತರ ಮಾತನಾಡಿದ ರಾಹುಲ್ ಗಾಂಧಿ, ಇಂದಿರಾ ಗಾಂಧಿ ಅವರ ಕನಸು ಇಲ್ಲಿ ನನಸಾಗಿದೆ. ಇದನ್ನು ನಾನು ಉದ್ಘಾಟಿಸಿರುವುದು ಹೆಮ್ಮೆ ಹಾಗೂ ಸಂತೋಷ ತಂದಿದೆ ಎಂದರು.
  • ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಹಸಿದವರ ವಿರುದ್ಧದ ನಮ್ಮ ಹೋರಾಟಕ್ಕೆ ಇಂದು ಐತಿಹಾಸಿಕ ದಿನವಾಗಿದೆ. ಹಸಿವು ಮತ್ತು ಅಪೌಷ್ಟಿಕತೆಯ ವಿರುದ್ಧದ ನಮ್ಮ ಸಮರಕ್ಕೆ ಇದು ಸಾಕ್ಷಿಯಾಗಿದೆ’ ಎಂದರು.

Leave a Reply