ಸಿಎಂ ಸಿದ್ದರಾಮಯ್ಯ ವಿರುದ್ಧವೇ ಎಸಿಬಿ- ರಾಜ್ಯಪಾಲರಿಗೆ ದೂರು! ಕಾರಣ ಏನು?

ಡಿಜಿಟಲ್ ಕನ್ನಡ ಟೀಮ್:

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧವೇ ಈಗ ಭ್ರಷ್ಟಾಚಾರ ನಿಗ್ರಹ ದಳ ಹಾಗೂ ರಾಜ್ಯಪಾಲರಿಗೆ ದೂರು ದಾಖಲಾಗಿದೆ. ಆರ್ ಟಿಐ ಕಾರ್ಯಕರ್ತ ರವೀಂದ್ರ ಎಂಬುವವರು ಈ ದೂರು ದಾಖಲಿಸಿದ್ದಾರೆ.

ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಲು ಕಾರಣ ಏನಪ್ಪಾ ಅಂದ್ರೆ, ಮಂಡ್ಯದ ಅಮೃತ ಮಹಲ್ ನ ಬೇವಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂಬುದು. ‘2014ರಲ್ಲಿ ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿರುವ ಮುಖ್ಯಮಂತ್ರಿಗಳು ಈ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ’ ಎಂದು ರವೀಂದ್ರ ಅವರ ದೂರಿನಲ್ಲಿ ಆರೋಪ ಮಾಡಿದ್ದಾರೆ.

ಸದ್ಯ ಎಸಿಬಿ ಜತೆಗೆ ರಾಜ್ಯಪಾಲರಿಗೂ ದೂರು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಯಾವ ರೀತಿಯ ವಿಚಾರಣೆ ಜರುಗಲಿದೆ ಎಂಬುದನ್ನು ಕಾದು ನೋಡಬೇಕು.

Leave a Reply