ದೀಪಿಕಾ ಪಡುಕೋಣೆ ಬೆಂಬಲಕ್ಕೆ ನಿಂತ್ರು ಸಿದ್ರಾಮಯ್ಯ

ಡಿಜಿಟಲ್ ಕನ್ನಡ ಟೀಮ್:

ಪದ್ಮಾವತಿ ಚಿತ್ರಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ವಿವಾದ ಹೊತ್ತಿಕೊಂಡಿದೆ. ರಜಪೂತರ ರಾಣಿ ಪದ್ಮಾವತಿಯನ್ನು ಚಿತ್ರದಲ್ಲಿ ಕೆಟ್ಟದಾಗಿ ತೋರಿಸಲಾಗಿದೆ ಎಂದು ಆರೋಪಿಸಿ ರಜಪೂತರ ಸಂಘಟನೆಗಳು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಹಾಗೂ ನಟಿ ದೀಪಿಕಾ ಪಡುಕೋಣೆ ವಿರುದ್ಧ ಕೆಂಡ ಕಾರುತ್ತಿವೆ. ಅಷ್ಟೇ ಅಲ್ಲದೆ ತಲೆ ಕಡಿದವರಿಗೆ ಬಹುಮಾನ ಎಂದು ಘೋಷಿಸಿ ಜೀವ ಬೆದರಿಕೆಯನ್ನು ಹಾಕಿರುವುದು ಎಲ್ಲರಿಗೂ ತಿಳಿದಿದೆ.

ಈಗ ವಿವಾದದ ಸುಳಿಯಲ್ಲಿರುವ ನಟಿ ದೀಪಿಕಾ ಪಡುಕೋಣೆ ಅವರ ಬೆಂಬಲಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಂತಿದ್ದಾರೆ. ದೀಪಿಕಾ ವಿರುದ್ಧ ಬೆದರಿಕೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಹರ್ಯಾಣ ಮುಖ್ಯಮಂತ್ರಿಗೆ ದೂರವಾಣಿ ಕರೆ ಮಾಡಿ, ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

ದೀಪಿಕಾ ಪಡುಕೋಣೆ ಕನ್ನಡದ ಹುಡುಗಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ನಟಿ. ಆಕೆಯ ಜತೆಗೆ ಇಡೀ ಕರ್ನಾಟಕದ ಜನತೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದರೊಂದಿಗೆ ಈ ಪದ್ಮಾವತಿ ಚಿತ್ರದ ವಿವಾದ ಕ್ರಮೇಣವಾಗಿ ರಾಜಕೀಯ ಬಣ್ಣ ಪಡೆದುಕೊಳ್ಳುವ ಸೂಚನೆಗಳು ಆರಂಭಿಸಿವೆ.

Leave a Reply