ಆಧಾರ್ ಜೋಡಣೆ ಕಾಲಮಿತಿ ಮಾರ್ಚ್ 31ರವರೆಗೆ ವಿಸ್ತರಿಸಲು ಕೇಂದ್ರ ನಿರ್ಧಾರ

ಡಿಜಿಟಲ್ ಕನ್ನಡ ಟೀಮ್:

ಆಧಾರ್ ಸಂಖ್ಯೆಯನ್ನು ಜೋಡಿಸದಿದ್ದರೆ ಬ್ಯಾಂಕ್ ಖಾತೆ ನಿಷ್ಕ್ರಿಯವಾಗುವ ಭೀತಿಯಲ್ಲಿದ್ದ ಜನರಿಗೆ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ತಡೆ ಸ್ವಲ್ಪ ಸಮಾಧಾನ ತಂದಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಸಹ ಆಧಾರ್ ಜೋಡಣೆಗೆ ಸಂಬಂಧಿಸಿದಂತೆ ನೀಡಿದ್ದ ಕಾಲಮಿತಿಯನ್ನು ವಿಸ್ತರಿಸಲು ನಿರ್ಧರಿಸಿದೆ.

ಹೌದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ ಆಧಾರ್ ಜೋಡಣೆಗೆ ಸಂಬಂಧಿಸಿದ ಕಾಲಮಿತಿಯನ್ನು ಮುಂದಿನ ವರ್ಷ ಮಾರ್ಚ್ 31ರವರೆಗೆ ವಿಸ್ತರಿಸುವುದಾಗಿ ವಿವರಣೆ ನೀಡಿದೆ. ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಐದು ಸದಸ್ಯರ ಪೀಠವನ್ನು ರಚಿಸಲಿದ್ದು, ಈ ವಿಷಯಕ್ಕೆ ಸಂಬಂಧಿಸಿದ ವಾವ ಪ್ರತಿವಾದಗಳನ್ನು ಆಲಿಸಲಿದೆ.

ಆದರೆ ಈ ಹಿಂದೆ ಕಾಲಮಿತಿ ವಿಸ್ತರಣೆಯಂತೆ ಮೊಬೈಲ್ ಸಂಖ್ಯೆ ಹಾಗೂ ಆಧಾರ್ ಜೋಡಣೆಗೆ ಫೆಬ್ರವರಿ 6ರಂದು ಅಂತಿಮ ಗಡುವಾಗಿದೆ ಎಂದು ಅಟಾರ್ನಿ ಜೆನರಲ್ ಕೆ.ಕೆ ವೇಣುಗೋಪಾಲ್ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟಿಗೆ ತಿಳಿಸಿದರು.

Leave a Reply