ಈಶ್ವರನ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ ವಿಜಯ್ ರುಪಾನಿ

ಡಿಜಿಟಲ್ ಕನ್ನಡ ಟೀಮ್:

ಪ್ರತಿಷ್ಠಿತ ಗುಜರಾತ್ ಚುನಾವಣೆಯಲ್ಲಿ ಪ್ರಯಾಸದ ಜಯ ಸಾಧಿಸಿದ ನಂತರ ಬಿಜೆಪಿ ನಾಯಕ ವಿಜಯ್ ರುಪಾನಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅದರೊಂದಿಗೆ ಸತತ ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾರೆ.

ಗಾಂಧಿನಗರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿಜಯ್ ರುಪಾನಿ ಜತೆಗೆ ಉಪ ಮುಖ್ಯಮಂತ್ರಿ ನಿತೀನ್ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದರು. ಈ ಇಬ್ಬರ ಜತೆಗೆ 9 ಸಂಪುಟ ಸಚಿವರು ಹಾಗೂ 10 ಸಚಿವರುಗಳು ಪ್ರಮಾಣವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವರುಗಳು ಹಾಜರಿದ್ದರು. ಇನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ 18 ವಿವಿಧ ರಾಜ್ಯಗಳ ಬಿಜೆಪಿ ಹಾಗೂ ಎನ್ಡಿಎ ಮೈತ್ರಿ ಕೂಟ ಪಕ್ಷದ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply