ಮೇವು ಹಗರಣ: ಮೂರನೇ ಪ್ರಕರಣದಲ್ಲೂ ಲಾಲು ದೋಷಿ!

ಡಿಜಿಟಲ್ ಕನ್ನಡ ಟೀಮ್:

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು ಎಂಬ ಗಾದೆ ಮಾತು ಸದ್ಯಕ್ಕೆ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಗೆ ಹೆಚ್ಚು ಸೂಕ್ತವಗುತ್ತಿದೆ. ಈಗಾಗಲೇ ಮೇವು ಹಗರಣದ ಐದು ಪ್ರಕರಣಗಳ ಪೈಕಿ ಎರಡರಲ್ಲಿ ದೋಷಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಮೂರನೇ ಪ್ರಕರಣದಲ್ಲೂ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಶಿಕ್ಷೆ ಪ್ರಮಾಣವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.

ಇನ್ನು ಕಳೆದ ಪ್ರಕರಣದಲ್ಲಿ ನಿರ್ದೋಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಅವರು ಈ ಪ್ರಕರಣದಲ್ಲಿ ದೋಷಿಯಾಗಿದ್ದಾರೆ. ಇನ್ನುಳಿದ ಎರಡು ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಮುಂದಿಿನ ಕೆಲವೇ ತಿಂಗಳಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಲಾಲು ಪ್ರಸಾದ್ ಐದೂ ಪ್ರಕರಣಗಳ ಪೈಕಿ ಮೂರರಲ್ಲಿ ದೋಷಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಆರ್ ಜೆಡಿ ಪಕ್ಷಕ್ಕೆ ದೊಡ್ಡ ಆಘಾತ ನೀಡಿದೆ.

Leave a Reply