ಅಂಡರ್ 19 ವಿಶ್ವಕಪ್: ಗಿಲ್ ಗುದ್ದಿಗೆ ಪತರುಗುಟ್ಟಿದ ಪಾಕಿಸ್ತಾನ, ಫೈನಲ್ ಪ್ರವೇಶಿಸಿದ ಭಾರತ

ಡಿಜಿಟಲ್ ಕನ್ನಡ ಟೀಮ್:

ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಅತ್ಯಾಕರ್ಷಕ ಪ್ರದರ್ಶನ ನೀಡಿದ ಭಾರತ ಕಿರಿಯರ ಕ್ರಿಕೆಟ್ ತಂಡ ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ 19ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಫೈನಲ್ ಗೆ ಲಗ್ಗೆ ಇಟ್ಟಿದೆ.

ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚಿನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಶುಭ್ನಮ್ ಗಿಲ್ (ಅಜೇಯ 102. 94 ಎಸೆತ, 7 ಬೌಂಡರಿ) ಅವರ ಆಕರ್ಷಕ ಶತಕದ ನೆರವಿನಿಂದ ಭಾರತ ತಂಡ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 272 ರನ್ ಪೇರಿಸಿತು. ಈ ಸ್ಪರ್ಧಾತ್ಮಕ ಮೊತ್ತವನ್ನು ಭೆನ್ನಟ್ಟಿದ ಪಾಕಿಸ್ತಾನ ತಂಡ ಭಾರತದ ವೇಗಿ ಇಶಾನ್ ಪೊರೆಲ್ (4 ವಿಕೆಟ್) ದಾಳಿಗೆ ತತ್ತರಿಸಿ ಕೇವಲ 69 ರನ್ ಗಳಿಗೆ ಸರ್ವಪತನ ಕಂಡಿತು. ಅದರೊಂದಿಗೆ ಪೃಥ್ವಿ ಶಾ ನೇತೃತ್ವದ ಭಾರತ ತಂಡ 203 ರನ್ ಗಳ ಭರ್ಜರಿ ಜಯ ಸಾಧಿಸಿತು. ಭಾರತ ಟೂರ್ನಿಯ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

Leave a Reply