ಹತ್ಯೆಯಾದವರೆಲ್ಲ ಬಿಜೆಪಿ ಕಾರ್ಯಕರ್ತರೆನ್ನೋದು ಕೆಟ್ಟ ಚಾಳಿ: ಸಿದ್ರಾಮಯ್ಯ ಆಕ್ರೋಶ

ಡಿಜಿಟಲ್ ಕನ್ನಡ ಟೀಮ್:
ಹತ್ಯೆಯಾದವರನ್ನೆಲ್ಲ ಬಿಜೆಪಿ ಕಾರ್ಯಕರ್ತರೆಂದು ಬಿಂಬಿಸಿಕೊಳ್ಳುವುದು ಆ ಪಕ್ಷದ ಮುಖಂಡರ ಚಾಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಜೆ.ಸಿ. ನಗರದ ಸಂತೋಷ್ ಹತ್ಯೆ ಖಂಡನೀಯ. ಅದರಲ್ಲಿ ಎರಡು ಮಾತಿಲ್ಲ. ಆದರೆ ಸಂತೋಷ್ ಬಿಜೆಪಿ ಕಾಯಕರ್ತನಲ್ಲ. ಆದರೂ ಬಿಜೆಪಿ ಮುಖಂಡರು ಆತನನ್ನು ತಮ್ಮ ಪಕ್ಷದ ಕಾರ್ಯಕರ್ತನೆಂದು ಹೇಳಿಕೊಂಡು ಚಿಲ್ಲರೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಶುಕ್ರವಾರ ತಿಳಿಸಿದರು.
ಗಾಂಜಾ ದಂಧೆ ಹಿನ್ನೆಲೆಯಲ್ಲಿ ಸಂತೋಷ್ ಹತ್ಯೆಯಾಗಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಗಾಂಜಾ ಮಾರಾಟಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಆದರೆ ಬಿಜೆಪಿ ಮುಖಂಡರು ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿರುವುದು ಸರಿಯಲ್ಲ ಎಂದರು.

Leave a Reply