ಚುನಾವಣೆ ಸಂದರ್ಭದಲ್ಲಿ ಸದ್ದು ಮಾಡಲಿದ್ದಾರೆ ರಾಹುಲ್ ದ್ರಾವಿಡ್!

ಡಿಜಿಟಲ್ ಕನ್ನಡ ಟೀಮ್:

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಮಾಜಿ ಕ್ರಿಕೆಟಿಗ ಹಾಗೂ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಸದ್ದು ಮಾಡಲಿದ್ದಾರೆ. ಈ ಬಾರಿ ಪ್ರಚಾರದ ವೇಳೆ ರಾಹುಲ್ ಸದ್ದು ಮಾಡುವ ಸಾಧ್ಯತೆ ಹೆಚ್ಚಾಗಿದೆ. ಹಾಗೆಂದು ಅವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಅಥವಾ ಯಾವುದೇ ಪಕ್ಷ ಅಥವಾ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿಲ್ಲ. ಬದಲಿಗೆ ದ್ರಾವಿಡ್ ಪ್ರಚಾರ ಮಾಡಲಿರುವುದು ಚುನಾವಣೆಯ ಪರವಾಗಿ.

ಹೌದು, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರು ತಮ್ಮ ಮತದಾನದ ಹಕ್ಕನ್ನು ಪೂರ್ಣ ಪ್ರಮಾದಲ್ಲಿ ಬಳಸಿಕೊಂಡು ತಮ್ಮ ಜವಾಬ್ದಾರಿ ಮೆರೆಯ ಬೇಕು ಎಂದು ಹೇಳಲಿದ್ದಾರೆ. ಸದ್ಯ ಚುನಾವಣಾ ಆಯೋಗ ರಾಜ್ಯ ಚುನಾವಣಾ ಪ್ರಚಾರಕ್ಕಾಗಿ ರಾಯಭಾರಿಗಳ ಹುಡುಕಾಟದಲ್ಲಿದ್ದು, ಆಯೋಗದ ಪಟ್ಟಿಯಲ್ಲಿ ದ್ರಾವಿಡ್ ಹೆಸರು ಮುಂಚೂಣಿಯಲ್ಲಿರುವ ಬಗ್ಗೆ ಮಾಹಿತಿ ಬಂದಿವೆ.

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರದ ವೇಳೆ ರಾಜ್ಯದ ಹೆಮ್ಮೆಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಹೆಸರನ್ನು ತಂದು ಕನ್ನಡಿಗರ ಮನ ಗೆಲ್ಲುವ ಪ್ರಯತ್ನ ಮಾಡಿದ್ದರು.

Leave a Reply