ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಟ್ವೀಟ್, ಶೀಘ್ರದಲ್ಲೇ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್ಐಆರ್

ಡಿಜಿಟಲ್ ಕನ್ನಡ ಟೀಮ್:

ಈಗಾಗಲೇ ಟೀಂ ಇಂಡಿಯಾ ವೇಗಿ ಮೊಹಮದ್ ಶಮಿ ಪತ್ನಿ ಜತೆಗಿನ ವಿವಾದದಿಂದ ಸಾಕಷ್ಟು ಸುದ್ದಿ ಮಾಡುತ್ತಿದ್ದು, ಈ ಮಧ್ಯೆ ಮತ್ತೊಬ್ಬ ಟೀಂ ಇಂಡಿಯಾ ಆಟಗಾರ ವಿವಾದಕ್ಕೆ ಸಿಲುಕಿದ್ದು, ಎಫ್ಐಆರ್ ದಾಖಲಾಗುವ ಪರಿಸ್ಥಿತಿ ನಿರ್ಮಾಣವವಾಗಿದೆ.

ಹೌದು, ಈ ಬಾರಿ ವಿವಾದಕ್ಕೆ ಸಿಲುಕಿರೋದು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ. ದಲಿತರ ಭಾವನೆಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಎಸ್ಸಿ/ಎಸ್ಟಿ ವಿಶೇಷ ನ್ಯಾಯಾಲಯ ಜೋಧ್ಪುರ ಪೊಲೀಸರಿಗೆ ನಿರ್ದೇಶನ ನೀಡಿದೆ. ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಕಾರಣ ಏನಂದ್ರೆ, ಪಾಂಡ್ಯ ಅವರು ತಮ್ಮ ಟ್ವಿಟರ್ ಖಾತೆಯಿಂದ ಸಂವಿಧಾನ ಶಿಲ್ಪಿ  ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಕೀಳಾಗಿ ಕಾಮೆಂಟ್ ಮಾಡಿದ್ದಾರೆ ಎಂಬ ಆರೋಪ.

ಕಳೆದ ವರ್ಷ ಡಿಸೆಂಬರ್ 26ರಂದು ಪಾಂಡ್ಯ ತಮ್ಮ ಟ್ವೀಟ್ ನಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಡಿ.ಆರ್. ಮೇಘವಾಲ್ ಎಂಬುವವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾಾರಣೆ ನಡೆಸಿದ ನ್ಯಾಯಾಲಯ, ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದೆ. ಪಾಂಡ್ಯ ಅವರ ವಿವಾದಾತ್ಮಕ ಟ್ವಿಟರ್ ಪೋಸ್ಟ್ ಹೀಗಿತ್ತು…

‘ಯಾವ ಅಂಬೇಡ್ಕರ್? ದೇಶದ ಕಾನೂನು ಹಾಗೂ ಸಂವಿಧಾನವನ್ನು ರಚಿಸಿದವರೇ ಅಥವಾ ದೇಶದಲ್ಲಿ ಮೀಸಲಾತಿ ಎಂಬ ರೋಗವನ್ನು ಹರಡಿದವರೇ?’

Leave a Reply