ನಿರೀಕ್ಷೆಯಂತೆ ನಾಲ್ಕು ಬಂಡಾಯ ಶಾಸಕರು ರಾಜೀನಾಮೆ

ಡಿಜಿಟಲ್ ಕನ್ನಡ ಟೀಮ್:

ನಿರೀಕ್ಷೆಯಂತೆ ರಾಜ್ಯಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಜೆಡಿಎಸ್ ನ ನಾಲ್ವರು ಬಂಡಾಯ ಶಾಸಕರು ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಕೆ.ಬಿ ಕೋಳಿವಾಡ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ, ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಬಂಡಾಯ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಇಕ್ಬಾಲ್ ಅನ್ಸಾರಿ, ಬಾಲಕೃಷ್ಣ ಅವರು ಇನ್ನು ರಾಜೀನಾಮೆ ನೀಡಿಲ್ಲ. ಈ ಇಬ್ಬರೂ ಮಧ್ಯಾಹ್ನ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಶಾಸಕ ರಮೇಶ್ ಬಾಬು ಹಾಗೂ ಬಂಡಿಸಿದ್ದೇಗೌಡ ಅವರು ಶುಕ್ರವಾರವೇ ರಾಜೀನಾಮೆ ನೀಡಿದ್ದರು.

Leave a Reply