ಕೃಷ್ಣ ಮೃಗ ಬೇಟೆ: ಸಲ್ಲುಗೆ ಐದು ವರ್ಷ ಜೈಲು

ಡಿಜಿಟಲ್ ಕನ್ನಡ ಟೀಮ್:
1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನ ಭಾಯ್ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ಜೋಧ್ಪುರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಐದು ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.
2 ದಶಕಗಳ ಹಿಂದೆ ಹಮ್ ಸಾಥ್ ಸಾಥ್ ಹೈ ಚಿತ್ರದ ಚಿತ್ರೀಕರಣದ ವೇಳೆ ನಡೆದ ಕೃಷ್ಣಮೃಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 28ರಂದು ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ. ಪ್ರಕರಣದ ಇತರೆ ಆರೋಪಿಗಳಾದ ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ಟಬು ಹಾಗೂ ನೀಲಂ ಅವರನ್ನು ನ್ಯಾಯಾಲಯ ನಿರ್ದೋಷಿ ಎಂದು ಪ್ರಕಟಿಸಿದೆ.
ಸಲ್ಮಾನ್ ಖಾನ್ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಇದ್ದು, ಸಲ್ಲುಸದ್ಯಕ್ಕೆ ಜೈಲು ಸೇರುವುದರಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದೆ.

Leave a Reply