ಉನ್ನಾವ್ ಅತ್ಯಾಚಾರ ಪ್ರಕರಣ: ಸಿಬಿಐನಿಂದ ಬಿಜೆಪಿ ಶಾಸಕ ವಿಚಾರಣೆ

ಡಿಜಿಟಲ್ ಕನ್ನಡ ಟೀಮ್:

ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ಅವರನ್ನು ಸಿಬಿಐ ವಿಚಾಾರಣೆಗೆ ಒಳಪಡಿಸಿದೆ. ಕುಲ್ದೀಪ್ ವಿರುದ್ಧ ಸಿಬಿಐ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಶುಕ್ರವಾರ ಸುದೀರ್ಘ ವಿಚಾರಣೆ ನಡೆಸಿದೆ.

ಇನ್ನು ಅತ್ಯಾಚಾರ ಸಂತ್ರಸ್ತೆಯ ಮನೆಗೂ ಬೇಟಿ ನೀಡಿರುವ ಸಿಬಿಐ ಅಧಿಕಾರಿಗಳು ಕುಟುಂಬಸ್ಥರಿಂದಲೂ ಹೇಳಿಕೆಗಳನ್ನು ಪಡೆದಿವೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಎಸ್ಪಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಉತ್ತರ ಪ್ರದೇಶ ಪೊಲೀಸರ ಮೇಲೆ ಸಿಬಿಐ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

Leave a Reply