ಅತ್ಯಾಚಾರಿಗಳಿಗೆ ಮರಣ ದಂಡನೆ ನೀಡಲು ಮೋದಿ ಸರ್ಕಾರ ನಿರ್ಧಾರ

408
ಡಿಜಿಟಲ್ ಕನ್ನಡ ಟೀಮ್:
ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ವಿರುದ್ಧದ ರಾಷ್ಟ್ರವ್ಯಾಪಿ ಆಂಧೋಲನದ ಪರಿಣಾಮವಾಗಿ ಮೋದಿ ಸಚಿವ ಸಂಪುಟ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ನೀಡಲು ನಿರ್ಧರಿಸಲಾಗಿದೆ.
ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎನ್‌ಡಿಎ ಸರ್ಕಾರದ ಸಚಿವ ಸಂಪುಟ ಫೋಕ್ಸೋ ಕಾಯ್ದೆಗೆ ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಿದೆ. ಈ ತಿದ್ದುಪಡಿಯಲ್ಲಿ 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಮರಣ ದಂಡನೆ ವಿಧಿಸಲು ನಿರ್ಧರಿಸಲಾಗಿದೆ.  ಉನ್ನಾವ್, ಕಥುವಾ ಸೇರಿದಂತೆ ದೇಶದ ಹಲವೆಡೆಗಳಲ್ಲಿನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

Leave a Reply