‘ಮಹದಾಯಿ ವಿವಾದ ಇತ್ಯರ್ಥ ಮಾಡುತ್ತೇವೆ…’ ಮೌನ ಮುರಿದು ಭರವಸೆ ಕೊಟ್ಟ ಮೋದಿ

ಡಿಜಿಟಲ್ ಕನ್ನಡ ಟೀಮ್:

ಸಂವಿಧಾನ ಮೂಲಕ ಮಹದಾಯಿ ವಿವಾದ ಇತ್ಯರ್ಥ. ಕುಡಿಯುವ ನೀರು ಪ್ರತಿಯೊಬ್ಬರ ಹಕ್ಕು. ಈ ಬಗ್ಗೆ ಎಲ್ಲರು ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಆದರೆ ಈ ವಿಚಾರವಾಗಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. 2007ರಲ್ಲಿ ಗೋವಾದ ಮಂಡ್ ಗಾಂವ್ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಲ್ಲ ಎಂದು ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಆಗ ಬೇರೆ ಪಕ್ಷದಲ್ಲಿದ್ದ ಸಿದ್ದರಾಮಯ್ಯರಿಗೆ ಈ ಬಗ್ಗೆ ಗೊತ್ತಿಲ್ಲವೇ ಪಕ್ಷ ಬದಲಿಸುವುದರಲ್ಲಿ ನಿರತರಾಗಿದ್ದ ಸಿದ್ದರಾಮಯ್ಯನವರು ತಮ್ಮ ಮೇಡಂ ಏನು ಹೇಳಿದ್ದರು ಎಂಬುದನ್ನು ತಿಳಿದುಕೊಳ್ಳಲಿ. ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನೀತಿ ಏನು…?

ಇದು ಮಹದಾಯಿ ಕುಡಿಯುವ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದು, ಕಾಂಗ್ರೆಸ್ ನಿಲುವನ್ನು ಪ್ರಶ್ನಿಸಿದ ರೀತಿ.

ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಕರ್ನಾಟಕದಲ್ಲಿ ಭರ್ಜರಿ ಸಮಾವೇಶಗಳನ್ನು ನಡೆಸುತ್ತಿರುವ ಮೋದಿ ಶನಿವಾರ ತುಮಕೂರು ಹಾಗೂ ಗದಗದಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಗದಗದಲ್ಲಿ ಮಹದಾಯಿ ವಿವಾದವನ್ನು ಇತ್ಯರ್ಥ ಮಾಡುವುದಾಗಿ ಪ್ರಧಾನಿ ಮೋದಿ ಅವರು ಭರವಸೆ ನೀಡಿರುವುದು ಜನರ ಮನಸನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದರು.

ಇನ್ನು ರೈತರ ಕೃಷಿಗೆ ಸಂಬಂಧಿಸಿದಂತೆ ಮಾತನಾಡಿದ ಮೋದಿ, ಕರ್ನಾಟಕದ ಅಭಿವೃದ್ಧಿಗಾಗಿ ಕೇಂದ್ರ 1 ಲಕ್ಷ ಕೋಟಿ ಅನುದಾನ ನೀಡಿದೆ. ಆದರೆ ಕರ್ನಾಟಕದಲ್ಲಿರುವ ಸರಕಾರ ಆ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ. ಏಲಕ್ಕಿ ಬೆಳೆ ಗುಣಮಟ್ಟ ಹೆಚ್ಚಿಸಲು ಕೇಂದ್ರ ಸಿದ್ಧವಿದೆ. ರೇಷ್ಮೆ ಬೆಳೆಗಾರರು ಪ್ರಗತಿ ಕಾಣ ಬೇಕಾದರೆ, ಜವಳಿ ಉದ್ಯಮಕ್ಕೆ ಹೆ್ಚಿನ ಒತ್ತು ನೀಡಬೇಕು. ಇದಕ್ಕೆ ಕೇಂದ್ರ ಸರಕಾರ ಸಿದ್ಧವಿದೆ. ಆದರೆ ನಮಗೆ ರಾಜ್ಯ ಸರ್ಕಾರದಿಂದ ಸೂಕ್ತ ಸಹಕಾರ ಸಿಕ್ಕಿಲ್ಲ ಎಂದು ಆರೋಪಿಸಿದರು.

ಇದಕ್ಕೂ ಮುನ್ನ ತುಮಕೂರಿನಲ್ಲಿ ಭಾಷಣ ಮಾಡಿದ ಮೋದಿ, ‘ಕಾಂಗ್ರೆಸ್ ನಾಯಕರು ಎಲ್ಲ ಪರಿಸ್ಥಿತಿಯಲ್ಲೂ ಸುಳ್ಳು ಹೇಳಿಕೊಂಡೇ ಬರುತ್ತಿದ್ದಾರೆ. ಅವರ ರಕ್ಷಣೆಗೆ ಈಗ ಜೆಡಿಎಸ್ ಪಣ ತೊಟ್ಟಿದೆ’ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಕಿಡಿಕಾರಿದರು.

Leave a Reply