ಸಿದ್ದರಾಮಯ್ಯ ಎರಡೂ ಕ್ಷೇತ್ರದಲ್ಲಿ ಸೋಲೋದು ಖಚಿತ: ಬಿಎಸ್ ವೈ

ಡಿಜಿಟಲ್ ಕನ್ನಡ ಟೀಮ್:

ನಾನು ಮುಖ್ಯಮಂತ್ರಿಯಾಗಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಲಿಂಗಾಯತ ಧರ್ಮ ಒಡೆಯುವ ಪ್ರಯತ್ನ ಮಾಡಿದರು. ಅವರಿಗೆ ಇದೇ ಉರುಳಾಗಲಿದೆ ಎಂದು ಬಿ.ಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹೇಳಿದಿಷ್ಟು… ‘ಸಿದ್ದರಾಮಯ್ಯ ಅವರು ಹಿಂದು ಧರ್ಮ ಒಡೆಯುವ ದುರುದ್ದೇಶದಿಂದ ಲಿಂಗಾಯತ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಶಿಫಾರಸು ಮಾಡಿದ್ದಾರೆ. ಜತೆಗೆ, ನನ್ನನ್ನು ಮುಖ್ಯಮಂತ್ರಿ ಆಗದಂತೆ ತಡೆಯುವ ಉದ್ದೇಶವೂ ಇದೆ. ಬಿಜೆಪಿ ರಾಜ್ಯದಲ್ಲಿ 150 ಸ್ಥಾನ ಪಡೆದು ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುವುದು ನೂರಕ್ಕೆ ನೂರು ಸತ್ಯ. ನಾನು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರು ರಾಷ್ಟ್ರೀಕೃತ ಬ್ಯಾ0ಕ್‌ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡುತ್ತೇನೆ. ಒಂದು ವೇಳೆ ಸಾಲ ಮನ್ನಾ ಮಾಡಲು ಸಾಧ್ಯವಾಗದಿದ್ದರೆ ಮರುಕ್ಷಣವೇ ಅಧಿಕಾರದಿಂದ ಕೆಳಗಿಳಿಯುತ್ತೇನೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭೀತಿಯಿಂದಲೇ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಎರಡು ಕಡೆ ಸೋಲುವುದು ಖಚಿತ. ಇವರ ಎರಡು ಕ್ಷೇತ್ರಗಳ ಸ್ಪರ್ಧೆ ಕುರಿತಂತೆ ಕಾಂಗ್ರೆಸ್‌ನಲ್ಲಿಯೇ ಅಪಸ್ವರವಿತ್ತು. ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ. ಜಿ ಪರಮೇಶ್ವರ ಅವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಬಾದಾಮಿಯಲ್ಲಿ ಸಿಎಂ ಸೋಲಿಗೆ ಸಜ್ಜಾಗಬೇಕಿದೆ. ನಾನು ಯಾವುದೇ ಭ್ರಷ್ಟಚಾರ ನಡೆಸಿಲ್ಲ. ನನ್ನ ಮೇಲಿನ ಬಹುತೇಕ ಪ್ರಕರಣಗಳು ಸಾಬೀತಾಗಿಲ್ಲ. ಕೆಲ ಪ್ರಕರಣಗಳನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಆದರೂ ನನ್ನನ್ನು ಭ್ರಷ್ಟಾಚಾರಿ ಎಂದು ಏಕೆ ಹೇಳುತ್ತೀರಿ ಸಿದ್ದರಾಮಯ್ಯ ಅವರೇ? ನೀವು ಭ್ರಷ್ಟಾಚಾರ ಮಾಡದೆ 70 ಲಕ್ಷ ಬೆಲೆಬಾಳುವ ದುಬಾರಿ ವಾಚ್ ಬಳಸುತ್ತಿದ್ದಿರಾ?’

Leave a Reply