ಯಡಿಯೂರಪ್ಪ ಮಾನಸಿಕ ಅಸ್ವಸ್ಥ ಎಂದ ಸಿದ್ರಾಮಯ್ಯ

ಡಿಜಿಟಲ್ ಕನ್ನಡ ಟೀಮ್:

ಮೇ 17ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮಾನಸಿಕ ಅಸ್ವಸ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿಯೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಸಿದ್ದರಾಮಯ್ಯ ಹೇಳಿದಿಷ್ಟು…
‘ಯಡಿಯೂರಪ್ಪ ಸರಕಾರ ನಡೆಸುವ ಭ್ರಮೆಯಲ್ಲಿದ್ದಾರೆ. ಬಿಜೆಪಿ ಈ ಬಾರಿ 60-65ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ. ಹೀಗಾಗಿ  ಅವರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ನಡೆಸಿದ ಪ್ರಚಾರ ಕಾರ್ಯಕ್ರಮ ಹಾಸ್ಯಾಸ್ಪದವಾಗಿತ್ತು. ಅಮಿತ್ ಶಾ ಮತ್ತು ಮೋದಿ ಅವರ ತಂತ್ರಗಾರಿಗೆ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ. ಕೇಂದ್ರ ಸರಕಾರ ತನ್ನ ಅಧಿಕಾರ ದುರ್ಬಳಕೆ ಮಾಡಿ ತೆರಿಗೆ ಇಲಾಖೆ ಅಧಿಕಾರಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮಾಡಿಸಲಾಗುತ್ತಿದೆ.  ಇನ್ನು ರಾಜ್ಯ ಸರಕಾರ ಚುನಾವಣೆ ಸಂದರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಸುಳ್ಳು. ನಾನು ಈವರೆಗೂ ಆ ಕೆಲಸ ಮಾಡಿಲ್ಲ. ಹಾಗೆ ಮಾಡಲು ಸಾಧ್ಯವೂ ಇಲ್ಲ. ಬಿಜೆಪಿ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ.’

Leave a Reply