ದೇವರ ಹೆಸರಲ್ಲಿ ಬಿಎಸ್ ವೈ ಪ್ರಮಾಣ ವಚನ, ವಿಧಾನಸೌಧದ ಮೂರನೇ ಮಹಡಿಗೆ ಪ್ರವೇಶ

ಡಿಜಿಟಲ್ ಕನ್ನಡ ಟೀಮ್:

ಮೂರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ರಾಜಭವನದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

‘ಬಿ.ಎಸ್ ಯಡಿಯೂರಪ್ಪ ಆದ ನಾನು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇನೆ….’ ಎಂದು ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡರು.

ಅತ್ತ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರೆ, ಇತ್ತ ಕಾಂಗ್ರೆಸ್ ನಾಯಕರು ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ರಾಜ್ಯಪಾಲರ ನಡೆ ವಿರುಧ್ಧ ಪ್ರತಿಭಟನೆ ನಡೆಸಿದ್ದಾರೆ.

ವಿಧಾನ ಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಿದ ಬಿಎಸ್ ವೈ ನಂತರ ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಪೂಜೆ ನಡೆಸಿ ಸಿಎಂ ಕುರ್ಚಿ ಅಲಂಕರಿಸಿದರು.

Leave a Reply