ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು!

ಡಿಜಿಟಲ್ ಕನ್ನಡ ಟೀಮ್:

ಪ್ರಸಕ್ತ ಸಾಲಿನ ಮುಂಗಾರು ನಿರೀಕ್ಷೆಗೂ ಮುನ್ನವೇ ಆಗಮಿಸಿದ್ದು, ಗುರುವಾರದಿಂದ ರಾಜ್ಯದಲ್ಲಿ ವರುಣನ ಅಬ್ಬರ ಬಿರುಸು ಪಡೆದಿದೆ.

ಮಂಗಳೂರು ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿಜಯಪುರದಲ್ಲೂ ಮಳೆ ಜೋರಾಗಿದೆ. ಮೃಗಶಿರಾ ನಕ್ಷತ್ರ ಮಳೆಯ ಮೊದಲ ದಿನದಿಂದಲೇ ಮುಂಗಾರು ಜಿಲ್ಲೆಯನ್ನು ಪ್ರವೇಶಿಸುತ್ತದೆ ಎಂಬ ಜನರ ನಂಬಿಕೆ ಮುಂದುವರಿದಿದೆ. ಶುಕ್ರವಾರ ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಭಾವ ಮಂದವಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಮಳೆ ಅಬ್ಬರ ಹೀಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ವರದಿ ಮಾಡಿದೆ.

Leave a Reply