ಚೇತರಿಕೆಯಾಗದ ಅಟಲ್ ಆರೋಗ್ಯ, ಪೊಲೀಸರಿಂದ ಸಿದ್ಧತೆ, ಎಲ್ಲೆಡೆ ಪ್ರಾರ್ಥನೆ

ಡಿಜಿಟಲ್ ಕನ್ನಡ ಟೀಮ್:

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡಿಲ್ಲ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ಬಿಡುಗಡೆ ಮಾಡಿರುವ ನೂತನ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ದೆಹಲಿಯತ್ತ ಪ್ರಯಾಣ ಆರಂಭಿಸಿದ್ದಾರೆ. ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮತ್ತೊಂದೆಡೆ ಇಂದು ನಡೆಯ ಬೇಕಿದ್ದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯನ್ನು ಮುಂದೂಡಲಾಗಿದೆ. ಇನ್ನು ಏಮ್ಸ್ ಆಸ್ಪತ್ರೆ ಸುತ್ತಮುತ್ತಲಿನ ಆವರಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ವಾಜಪೇಯಿ ಅವರ ನಿವಾಸಕ್ಕೆ ಹೋಗುವ ರಸ್ತೆ ಸಂಚಾರ ಮಾರ್ಗ ಬದಲಿಸಲಾಗಿದೆ.

ದೇಶಾದ್ಯಂತ ವಾಜಪೇಯಿ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಲಾಗುತ್ತಿದ್ದು, ಲಖನೌನ ಎನ್ ಡಿ ಕಾನ್ವೆಂಟ್ ನಲ್ಲಿ ಮುಸಲ್ಮಾನ ವಿದ್ಯಾರ್ಥಿಗಳು ಅಟಲ್ ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

Leave a Reply