ವೆಟ್ಟೋರಿ ಬದಲಿಗೆ ಆರ್ ಸಿಬಿ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್!

ಡಿಜಿಟಲ್ ಕನ್ನಡ ಟೀಮ್:

ಕಳೆದ ಎರಡು ಐಪಿಎಲ್ ಆವೃತ್ತಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಸ್ಥಾನದಿಂದ ಡೇನಿಯಲ್ ವೆಟ್ಟೋರಿ ಅವರನ್ನು ವಜಾಗೊಳಿಸಿದ್ದ ಆಡಳಿತ ಮಂಡಳಿ ಈಗ ಟೀಮ್ ಇಂಡಿಯಾ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಿದೆ.

ಕಳೆದ ಆರುತ್ತಿಯಲ್ಲಿ ಬ್ಯಾಟಿಂಗ್ ಮಾರ್ಗದರ್ಶಕರಾಗಿದ್ದ ಗ್ಯಾರಿ ಅವರಿಗೆ ಮುಖ್ಯ ಕೋಚ್ ಸ್ಥಾನ ನೀಡಲಾಗಿದೆ. ಈ ಹಿಂದೆ ಟೀಮ್ ಇಂಡಿಯಾ ಕೋಚ್ ಆಗಿ ವಿಶ್ವ ಕಪ್ ಗೆದ್ದ ತಂಡವನ್ನು ಮುನ್ನಡೆಸಿದ್ದ ಗುರು ಗ್ಯಾರಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಗುರುವಾಗಲಿದ್ದಾರೆ.

2014, 2015ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ದೇವಿಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಗ್ಯಾರಿ ಈಗ ಮೊದಲ ಬಾರಿಗೆ ಟೂರ್ನಿಯಲ್ಲಿ ಮುಖ್ಯ ಕೋಚ್ ಆಗಿದ್ದಾರೆ.

Leave a Reply