ಕಾದುನೋಡಿ ಬಿಜೆಪಿ ಶಾಸಕರೇ ರಾಜೀನಾಮೆ ನೀಡುತ್ತಾರೆ: ಕುಮಾರಸ್ವಾಮಿ

1305

ಡಿಜಿಟಲ್ ಕನ್ನಡ ಟೀಮ್:

‘ಜಾರಕಿಹೊಳಿ ಸಹೋದರರಾದ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರುತ್ತಾರೆ ಎಂಬುದು ಸುಳ್ಳು. ಕಾದು ನೋಡಿ ಬಿಜೆಪಿಯ ಶಾಸಕರೇ ರಾಜೀನಾಮೆ ನೀಡುತ್ತಾರೆ…’ ಇದು ಕಾಂಗ್ರೆಸ್ ಕೆಲ ಶಾಸಕರು ಬಿಜೆಪಿ ಸೇರ್ಪಡೆ ಯಾಗುವ ವರದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿರುವ ಪ್ರತಿಕ್ರಿಯೆ.

ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾದಿಟ್ಟಿದ್ದಾಗ ಜಾರಕಿಹೊಳಿ ಸಹೋದರರು ಬಿಜೆಪಿ ಸೇರುವ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು…

‘ಜಾರಕಿಹೊಳಿ ಬ್ರದರ್ಸ್ ಬಿಜೆಪಿ ಸೇರುತ್ತಾರೆ, ಅವರ ಜೊತೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ ಎಂಬುದೆಲ್ಲ ನೀವು ಮಾಧ್ಯಮದವರು ಹಬ್ಬಿಸುತ್ತಿರುವ ಸುಳ್ಳು ಸುದ್ದಿಯಷ್ಟೆ. ಹೀಗೆ ಸುಳ್ಳು ಸುದ್ದಿ ಹಬ್ಬಿಸುವುದರಿಂದ ನಿಮಗೆ ಏನು ಸಿಗುತ್ತದೆ?

ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವುದಿಲ್ಲ, ಬಿಜೆಪಿ ಶಾಸಕರೇ ಯೂ ಟರ್ನ್ ಹೊಡೆಯಲಿದ್ದಾರೆ. ಬಿಜೆಪಿಯ ನಾಲ್ಕೈದು ಶಾಸಕರಿಂದ ರಾಜೀನಾಮೆ ಕೊಡಿಸೋಣ, ಕಾಯುತ್ತಿರಿ. ಜಾರಕಿಹೊಳಿ ಬ್ರದರ್ಸ್ ಬಗ್ಗೆ ಯಾವುದೇ ಗೊಂದಲವಿಲ್ಲ, ಬಿಜೆಪಿಗೆ ಹೋಗುವ ಬಗ್ಗೆ ಅವರು ವಿಚಾರ ಮಾಡಿಲ್ಲ.’

Leave a Reply