ಔಷಧ ಮಳಿಗೆಗಳ ಮುಷ್ಕರ: ಸಚಿವ ಡಿಕೆಶಿ ಎಚ್ಚರಿಕೆ

ಡಿಜಿಟಲ್ ಕನ್ನಡ ಟೀಮ್:

ಸರಕಾರಿ ಆಸ್ಪತ್ರೆಗಳು ಹಾಗೂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಔಷಧ ಪ್ಯಾಪಾರ ಮಳಿಗೆಗಳು (ಮೆಡಿಕಲ್ ಸ್ಟೋರ್ಸ್) ಶುಕ್ರವಾರ ಎಂದಿನಂತೆ ಕಾರ್ಯನಿರ್ಹಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಆನ್ ಲೈನ್ ನಲ್ಲಿ ಔಷಧ ಮಾರಾಟಕ್ಕೆ ಅವಕಾಶ ಕಲ್ಪಿಸಿರುವ ಕೇಂದ್ರದ ನಿರ್ಧಾರವನ್ನು ಖಂಡಿಸಿ ಔಷಧ ವ್ಯಾಪಾರಿಗಳು ರಾಷ್ಟ್ರದ್ಯಂತ ಬಂದ್ ಗೆ ಕರೆ ನೀಡಿವೆ. ರಾಜ್ಯದಲ್ಲೂ ಬಹುತೇಕ ಎಲ್ಲ ಔಷಧ ಕೇಂದ್ರಗಳು ಮುಚ್ಚುವ ಸಾಧ್ಯತೆ ಇದ್ದು, ರೋಗಿಗಳಿಗೆ ಸಮಸ್ಯೆ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಅರಿತ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್, ಸರಕಾರಿ ಆಸ್ಪತ್ರೆಗಳು ಹಾಗೂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಔಷಧ ಪ್ಯಾಪಾರ ಮಳಿಗೆಗಳು ಬಂದ್ ಆಗದಂತೆ ನೋಡಿಕೊಳ್ಳಬೇಕು ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ

ಒಂದೊಮ್ಮೆ ಯಾವುದಾದರೂ ಮಳಿಗೆಗಳು ಬಂದ್ ನಲ್ಲಿ ಪಾಲ್ಗೊಂಡಿದ್ದೇ ಆದಲ್ಲಿ ಅಂತಹ ಮಳಿಗೆಗಳ ಪರವಾನಗಿ ರದ್ದುಪಡಿಸಿ, ಸರಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಿಂದ ತೆರವು ಮಾಡಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಅಗತ್ಯ ಸೇವಾ ಕಾಯಿದೆ ವ್ಯಾಪ್ತಿಯಲ್ಲಿ ಬರುವ ಔಷಧ ಮಳಿಗೆಗಳು ಯಾವುದೇ ಕಾರಣಕ್ಕೂ ಬಂದ್ ನಲ್ಲಿ ಭಾಗವಹಿಸುವಂತಿಲ್ಲ. ಭಾಗವಹಿಸಿದರೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಅವರು ತಿಳಿಸಿದ್ದಾರೆ.

Leave a Reply