ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಅಸ್ತು! 800 ವರ್ಷಗಳ ಪದ್ಧತಿಗೆ ಬಿತ್ತು ಬ್ರೇಕ್!

ಡಿಜಿಟಲ್ ಕನ್ನಡ ಟೀಮ್:

ಎಲ್ಲ ವಯೋಮಾನದ ಮಹಿಳೆಯರು ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯಕ್ಕೆ ಪ್ರವೇಶ ನೀಡಬಹುದು ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಅದರೊಂದಿಗೆ ದೇವಾಲಯದಲ್ಲಿ 800 ವರ್ಷಗಳಿಂದ ಆಚರಣೆ ಮಾಡಿಕೊಂಡು ಬಂದಿದ್ದ ಪದ್ಧತಿಗೆ ಬ್ರೇಕ್ ಬಿದ್ದಂತಾಗಿದೆ.

ಋತುಮತಿಯಾಗುವ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧವನ್ನು ಸುಪ್ರೀಂ ಕೋರ್ಟಿನ ಪಂಚ ಪೀಠ ತೆರವುಗೊಳಿಸಿದ್ದು, ಲಿಂಗ ಸಮಾನತೆಯ ಆಧಾರದ ಮೇಲೆ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿ ಆದೇಶ ನೀಡಿದೆ. ಐದು ನ್ಯಾಯಾಧೀಶರ ಪೈಕಿ ನಾಲ್ಕು ನ್ಯಾಯಾಧೀಶರು ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಕೊಟ್ಟರೆ, ಓರ್ವ ನ್ಯಾಯಾಧೀಶರು ಮಹಿಳೆಯರ ಪ್ರವೇಶ ನಿಷೇಧ ಮುಂದುವರಿಕೆ ಉತ್ತಮ ಎಂದು ತಿಳಿಸಿದ್ದರು.

ಸುಪ್ರೀಂ ಕೋರ್ಟಿನ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿರುವ ದೇವಾಲಯ ಆಡಳಿತ ಮಂಡಳಿ, ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಸದ್ಯ ಸುಪ್ರೀಂ ಕೋರ್ಟಿನ ಪಂಚ ನ್ಯಾಯಮೂರ್ತಿಗಳ ಪೀಠ ಈ ತೀರ್ಪು ನೀಡಿದ್ದು, ಮೇಲ್ಮನವಿ ಅರ್ಜಿ ಸಲ್ಲಿಕೆಯಾದರೆ ಸಪ್ತ ನ್ಯಾಯಾಧೀಶರ ಪೀಠಕ್ಕೆ ವಿಚಾರಣೆ ವರ್ಗಾವಣೆಯಾಗಲಿದೆ.

Leave a Reply