ಕೈ ನಾಯಕರ ವಿರುದ್ಧ ಕೌರವ ಆಕ್ರೋಶ! ಕಾಂಗ್ರೆಸ್ ಹಿರಿಯರಿಗೆ ಮುಜುಗರ!

ಡಿಜಿಟಲ್ ಕನ್ನಡ ಟೀಮ್:

ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

‘ಕಾಂಗ್ರೆಸ್ ಸಂಪುಟ ವಿಸ್ತರಣೆಯನ್ನು ಅನಗತ್ಯವಾಗಿ ವಿಳಂಬ ಮಾಡಿ ತಮ್ಮ ಶಾಸಕರಿಗೆ ಅಪಮಾನ ಮಾಡುತ್ತಿದೆ. ಆ ಮೂಲಕ ಪ್ರಜಾಪ್ರಭುತ್ವದ ಕೊಲೆ ಮಾಡುತ್ತಿದೆ. ಇದು ಪಕ್ಷದಲ್ಲಿರುವ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ’ ಎಂದು ಹರಿಹಾಯ್ದಿದ್ದಾರೆ.

ಉಪ ಚುನಾವಣೆ ಘೋಷಣೆಯಾದ ನಂತರ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಾತೆಯನ್ನು ಟ್ಯಾಗ್ ಮಾಡಿ ಬಿ.ಸಿ ಪಾಟೀಲ್ ಟೀಕಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ರಚನೆ ನಂತರ ಬಂಡಾಯ ಬೆಂಕಿ ನಂದಿಸಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಹಿರಿಯ ನಾಯಕರಿಗೆ ಈಗ ಬಿ.ಸಿ ಪಾಟೀಲ್ ಅವರ ಈ ಆಕ್ರೋಶದ ಸಂದೇಶ ಮುಜುಗರ ಉಂಟುಮಾಡಿದೆ.

Leave a Reply