ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ!

ಡಿಜಿಟಲ್ ಕನ್ನಡ ಟೀಮ್:

ಪೌರಾಡಳಿತ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ಸರಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ ಶಾಕ್ ಕೊಟ್ಟಿದ್ದಾರೆ.

ಸಚಿವ ಸಂಪುಟ ಸಭೆಗೆ ಸತತ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ಈ ನಿರ್ಧಾರಕ್ಕೆ ಮುಂದಾಗಿದ್ದು, ಸೂಕ್ತ ಕ್ರಮಕ್ಕೆ DPAR ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಆರೋಗ್ಯವಾಗಿದ್ದು, ನಗರದಲ್ಲೇ ಇದ್ದರೂ ರಮೇಶ ಜಾರಕಿಹೋಳಿ ರಾಜ್ಯ ಸಚಿವ ಸಂಪುಟ ಸಭೆಗೆ ಉದ್ದೇಶಪೂರ್ವಕವಾಗಿ ಗೈರುಹಾಜರಾಗುತ್ತಿದ್ದಾರೆ. ಸಚಿವರ ನಡೆಯನ್ನು ಪ್ರಶ್ನಿಸಿ ಸ್ವೀಕರ್ ಅವರಿಗೆ ದೂರು ನೀಡಲಾಗಿತ್ತು.

ಈ ದೂರು ಸ್ವೀಕರಿಸಿದ್ದ ಸ್ಪೀಕರ್ ಮುಖ್ಯ ಕಾರ್ಯದರ್ಶಿ ಅವರಿಗೆ ನಿರ್ದೇಶನ ನೀಡಿದ್ದರು. ಈಗ ಮುಖ್ಯ ಕಾರ್ಯದರ್ಶಿಗಳು DPAR ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸಂಪುಟ ಸಭೆಗೆ ಗೈರಾದ ಬಗ್ಗೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಕ್ಕೆ ಮುಂದಾಗುವಂತೆ ಸೂಚನೆ ನೀಡಿದ್ದಾರೆ.

ಈ ಹಿಂದೆ ತಾವು ಸಂಪುಟ ಸಭೆಯಲ್ಲಿ ಭಾಗವಹಿಸದಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಚಿವರು, ‘ಪ್ರಾರ್ಥನೆಯೊಂದು ಈಡೇರುವವರೆಗೂ ಸಂಪುಟ ಸಭೆ ಹಾಗೂ ಸರಕಾರಿ ವಾಹನ ಬಳಕೆಯಿಂದ ದೂರ ಇರುವುದಾಗಿ’ ಹೇಳಿದ್ದರು.

Leave a Reply