ನನಗೆ ವಯಸ್ಸಾಯ್ತು ಎಂದ ಸಿದ್ದರಾಮಯ್ಯ ನಿವೃತ್ತಿ ನಿರ್ಧಾರ ಪ್ರಕಟ

ಡಿಜಿಟಲ್ ಕನ್ನಡ ಟೀಮ್:

‘ನನಗೂ ಸಹ ವಯಸ್ಸಾಗುತ್ತಿದೆ. ನನಗೆ 71 ವರ್ಷ ವಯಸ್ಸಾಗಿದೆ. ಹಾಗಾಗಿ ಈಗಿನ 5 ವರ್ಷ ಪೂರೈಸಿದ ಮೇಲೆ ಇನ್ನು ಮುಂದೆ ಚುನಾವಣೆಗೆ ನಿಲ್ಲೋದಿಲ್ಲ…’ ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ರೀತಿ.

ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡ ಪಟ್ಟಣದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹೇಳಿದ್ದಿಷ್ಟು…

ನನಗೂ ಸಹ ವಯಸ್ಸಾಗುತ್ತಿದೆ. 5 ವರ್ಷ ಶಾಸಕ ಸ್ಥಾನದ ಅವಧಿ ಪೂರೈಸಿದ ಮೇಲೆ ಇನ್ನು ಮುಂದೆ ಚುನಾವಣೆಗೆ ನಿಲ್ಲೋದಿಲ್ಲ. ಅಭಿವೃದ್ಧಿ ಕೆಲಸ ಮಾಡಲು ಚುನಾವಣೆಗೆ ನಿಲ್ಲಬೇಕೆಂದಿಲ್ಲ. ಆದರೆ, ರಾಜಕೀಯದಿಂದ ನಾನು ದೂರವಾಗುವುದಿಲ್ಲ. ಬಾದಾಮಿ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಈ ಐದು ಪೂರೈಸಿದ ಮೇಲೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ರಾಜಕಾರಣ ಬಿಡುವುದಿಲ್ಲ.’

Leave a Reply