ರಾಮಮಂದಿರಕ್ಕೆ ಸುಗ್ರೀವಾಜ್ಞೆಯೊಂದೆ ಮಾರ್ಗವೇ? ಈ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಹೇಳಿದ್ದೇನು?

ಡಿಜಿಟಲ್ ಕನ್ನಡ ಟೀಮ್:

ರಾಮ ಮಂದಿರ ವಿಚಾರಣೆಯನ್ನು ಜನವರಿಗೆ ಮುಂದೂಡಿರುವ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯ ಸ್ವಾಮಿ ಈ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸುವ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುಪ್ರೀಂಕೋರ್ಟ್ ರಾಮಮಂದಿರ ವಿಚಾರಣೆಯನ್ನು ಮುಂದೂಡಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಿಷ್ಟು…
‘ ಕೋರ್ಟ್ ವಿಚಾರಣೆಯನ್ನು ಜನವರಿಗೆ ಮುಂದೂಡಿದೆ ಅದು ನ್ಯಾಯಾಂಗದ ಅಧಿಕಾರ. ಸಂಸತ್ತಿಗೂ ತನ್ನದೇ ಆದ ಅಧಿಕಾರವಿದೆ. ಸಂಸತ್ತಿ ಗಿಂತ ಕೋರ್ಟ್ ಮೇಲಲ್ಲ ಈ ತಪ್ಪು ಕಲ್ಪನೆ ಜನರ ಮನಸ್ಸಿಂದ ಕಳಿಸಬೇಕಾಗಿದೆ. ನಮಗೂ ಕಾನೂನು ತಿದ್ದುಪಡಿ ಮಾಡುವ ಅಧಿಕಾರವಿದೆ. ಅದನ್ನು ಮಾಡುತ್ತೇವೆ. ಸುಪ್ರೀಂ ಕೋರ್ಟ್ ಯಾವುದೇ ಕಾನೂನನ್ನು ಜಾರಿಗೆ ತರಲು ಸಾಧ್ಯವಿಲ್ಲ ಅಧಿಕಾರ ಇರುವುದು ಸಂಸತ್ತಿಗೆ ಮಾತ್ರ.
ಸದ್ಯದ ಪರಿಸ್ಥಿತಿಯಲ್ಲಿ ರಾಮಮಂದಿರ ವಿಚಾರವಾಗಿ ಸುಗ್ರೀವಾಜ್ಞೆ ಹೊರಡಿಸಬೇಕಾಗಿದೆ. ಅಯೋಧ್ಯೆ ಜಾಗದಲ್ಲಿ ರಾಮ ಮಂದಿರ ಇದ್ದದ್ದು ಸ್ಪಷ್ಟವಾಗಿದೆ ಈ ವಿಚಾರವಾಗಿ ಚಳಿಗಾಲ ಅಧಿವೇಶನದಲ್ಲಿ ನಾನು ಧ್ವನಿ ಎತ್ತುತ್ತೇನೆ.’

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದಿನ ವರ್ಷ ಲೋಕಸಭೆ ಚುನಾವಣೆಗೂ ಮುನ್ನ ಪಡೆಯಬೇಕೆಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಪೇಕ್ಷಿಸುತ್ತಿದೆ. ಆದರೆ ವಿಚಾರಣೆಯನ್ನು ಸುಪ್ರೀಂಕೋರ್ಟ್ ಎರಡು ತಿಂಗಳ ಕಾಲ ಮುಂದೂಡಿರುವುದರಿಂದ ರಾಮ ಮಂದಿರದ ತೀರ್ಪು ಮುಂಬರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಬರುವುದೇ? ಎಂಬ ಅನುಮಾನ ಹುಟ್ಟುಕೊಂಡಿದೆ. ಹೀಗಾಗಿ ರಾಮಮಂದಿರ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಸುಬ್ರಮಣ್ಯ ಸ್ವಾಮಿ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯದೆ ರಾಮ ಮಂದಿರ ನಿರ್ಮಾಣಕ್ಕೆ ಒಂದಾಗುವುದೇ? ಎಂಬ ಪ್ರಶ್ನೆ ಉದ್ಭವಿಸಿದೆ.

Leave a Reply