ಕರ್ನಾಟಕದ ನೆರೆಗೆ ಹೆಚ್ಚುವರಿಯಾಗಿ ₹546 ಕೋಟಿ ಕೊಟ್ಟ ಕೇಂದ್ರ!

ಡಿಜಿಟಲ್ ಕನ್ನಡ ಟೀಮ್:

ಮಡಿಕೇರಿ, ಕೊಡಗು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಉಂಟಾಗಿದ್ದ ಪ್ರವಾಹ ಹಾಗೂ ಭೂ ಕುಸಿತಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರ ₹ 546.21 ಕೋಟಿ ಬಿಡುಗಡೆ ಮಾಡಿದೆ.

ಸೋಮವಾರ ದೆಹಲಿಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಈ ಹಣ ಬಿಡುಗಡೆ ಮಾಡಲಾಗಿದೆ. ಈ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೃಷಿ ಸಚಿವ ರಾಧಾ ಮೋಹನ್ ಸಿಂಗ್, ಗೃಹ ಕಾರ್ಯದರ್ಶಿ ರಾಜೀವ್ ಗೌಬ ಸೇರಿದಂತೆ, ಗೃಹ, ಹಣಕಾಸು ಮತ್ತು ಕೃಷಿ ಸಚಿವಾಲಯದ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply