ಕರ್ನಾಟಕದ ಮೈತ್ರಿ ಸರ್ಕಾರದ ವಿರುದ್ಧ ಮೋದಿ ಮಧ್ಯಪ್ರದೇಶದಲ್ಲಿ ಟೀಕೆ!

ಡಿಜಿಟಲ್ ಕನ್ನಡ ಟೀಮ್:

ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಭರಸವೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ಇಂದು ರೈತರನ್ನು ಜೈಲಿಗೆ ಕಳುಹಿಸಲು ಮುಂದಾಗಿದೆ…’ ಇದು ರಾಜ್ಯ ರಾಜಕೀಯ ಬೆಳವಣಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶ ಚುನಾವಣೆ ಅಸ್ತ್ರವಾಗಿ ಬಳಸಿಕೊಂಡಿರುವ ಪರಿ.

ಇದೇ 28ರಂದು ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಸೋಮವಾರ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನರೇಂದ್ರ ಮೋದಿ ಕರ್ನಾಟಕದ ಮೈತ್ರಿ ಸರ್ಕಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಈ ವೇಳೆ ಅವರು ಹೇಳಿದ್ದಿಷ್ಟು…

‘ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದ್ದ ಕಾಂಗ್ರೆಸ್, ಈಗ ರೈತರ ವಿರುದ್ಧ ವಾರೆಂಟ್ ನೀಡಿ ಜೈಲಿಗೆ ದಬ್ಬಲು ಮುಂದಾಗಿದೆ. ಆದರೆ ನಮ್ಮ ಸರಕಾರ 2022ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟು ಮಾಡುವತ್ತ ಗಮನ ಹರಿಸಿದೆ. ದೇಶದಲ್ಲಿ ಆಳವಾಗಿ ನೆಲೆಸಿರುವ ಭ್ರಷ್ಟಾಚಾರವೆಂಬ ರೋಗ ನಿರ್ಮೂಲನೆ ಮಾಡಲು ನೋಟ್ಯಂತರವೆಂಬ ಕಹಿ ಔಷಧವನ್ನು ಕೊಟ್ಟಿದ್ದೇವೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿ ಇದುವರೆಗೆ 14ಕೋಟಿ ಮಂದಿಗೆ ಸಾಲವನ್ನು ಗ್ಯಾರಂಟಿ ಇಲ್ಲದೇ ತಮ್ಮ ಸರಕಾರ ನೀಡಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹತ್ತು ವರ್ಷಗಳ ಲ್ಲಿ ಮಾಡಿದ್ದನ್ನು ನಾವೂ ನಾಲ್ಕು ವರ್ಷಗಳಲ್ಲಿ ಮಾಡಿದ್ದೇವೆ.

Leave a Reply