ಕಾಶ್ಮೀರದಲ್ಲಿ ವಿಧಾನಸಭೆ ಮಾತ್ರವಲ್ಲ ಕಾಂಗ್ರೆಸ್ ಆಸೆಯನ್ನು ವಿಸರ್ಜಿಸಿದ ರಾಜ್ಯಪಾಲರು!

ಡಿಜಿಟಲ್ ಕನ್ನಡ ಟೀಮ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಇದ್ದ ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ನ್ಯಾಷನಲ್ ಕಾಂಗ್ರೆಸ್ ಹಾಗೂ ಪಿಡಿಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಇರಾದೆ ಹೊಂದಿದ್ದ ಕಾಂಗ್ರೆಸ್ಸಿಗೆ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಭರ್ಜರಿ ಶಾಕ್ ಕೊಟ್ಟಿದ್ದಾರೆ.

ಮುಂದಿನ ತಿಂಗಳು ರಾಷ್ಟ್ರಪತಿ ಆಳ್ವಿಕೆ ಮುಕ್ತಾಯಗೊಳ್ಳುತ್ತಿದ್ದಾಗ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ತನ್ನ ಭಿನ್ನಾಭಿಪ್ರಾಯ ಮರೆತು ನ್ಯಾಷನಲ್ ಕಾಂಗ್ರೆಸ್ ಹಾಗೂ ಪಿಡಿಪಿ ಜೊತೆ ಮೈತ್ರಿಗೆ ಮುಂದಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳು ಬುಧವಾರ ಮಾತುಕತೆಗಳು ನಡೆದಿದ್ದವು.

ಈ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಪಿಡಿಪಿ ಹಿರಿಯ ನಾಯಕ ಅಲ್ತಾಫ್ ಬುಖಾರಿ ಅವರು ನ್ಯಾಷನಲ್ ಕಾಂಗ್ರೆಸ್ ಉಪಾಧ್ಯಾಕ್ಷ ಹಾಗೂ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ‘ಜಮ್ಮು ಮತ್ತು ಕಾಶ್ಮೀರ ಜನತೆಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುತ್ತೇವೆ. ರಾಜ್ಯದಲ್ಲಿ ಸರಕಾರ ರಚಿಸಲು ಪಿಡಿಪಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಕೈಜೋಡಿಸಲು ಮನಸ್ಸು ಮಾಡಿವೆ’ ಎಂದು ಬುಖಾರಿ ತಿಳಿಸಿದ್ದರು.

ಈ ಮೂರು ಪಕ್ಷಗಳು ಒಂದಾಗಿ ಮೆಹಬೂಬಾ ಮುಫ್ತಿ ಸರ್ಕಾರ ರಚನೆಗೆ ಅವಕಾಶ ಕೇಳುವ ಸೂಚನೆ ಸಿಗುತ್ತಿದ್ದಂತೆ ರಾಜ್ಯಪಾಲರು ದಿಢೀರನೆ ಬುಧವಾರ ರಾತ್ರಿ ವಿಧಾನಸಭೆ ವಿಸರ್ಜನೆ ಮಾಡುವ ಮೂಲಕ ಕಣಿವೆ ರಾಜ್ಯದಲ್ಲಿ ಸರಕಾರದ ಕನಸು ಕಾಣುತ್ತಿದ್ದ ಈ ಮೂರೂ ಪಕ್ಷಗಳಿಗೆ ಆಘಾತ ನೀಡಿದ್ದಾರೆ.

Leave a Reply