ಯಶ್ ರಾಧಿಕಾ ದಂಪತಿಗೆ ಹೆಣ್ಣು ಮಗು!

ಡಿಜಿಟಲ್ ಕನ್ನಡ ಟೀಮ್:

ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಭಾನುವಾರ ಬೆಳಗ್ಗೆ 6.20ರ ವೇಳೆಗೆ ರಾಧಿಕಾ ಅವರಿಗೆ ಹೆರಿಗೆಯಾಗಿದ್ದು, ಯಶ್ ಆಸೆಯಂತೆ ಹೆಣ್ಣು ಮಗು ಜನಿಸಿದೆ. ಇದೇ ತಿಂಗಳು 2ನೇ ವಾರ ವೈದ್ಯರು ಹೆರಿಗೆ ದಿನಾಂಕ ನೀಡಿದ್ದರು. ಆದರೆ ನಿನ್ನೆ ರಾತ್ರಿ ರಾಧಿಕಾ ಅವರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗು ಆರೋಗ್ಯವಾಗಿ ಬೆಳೆದಿರುವ ಹಿನ್ನೆಲೆಯಲ್ಲಿ ಹೆರಿಗೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply