ಪ್ರಧಾನಿ ಮೋದಿಗೆ ಟ್ವಿಟ್ಟರ್‌ನಲ್ಲಿ ಸಿದ್ದು ಗುದ್ದು..!

ಡಿಜಿಟಲ್ ಕನ್ನಡ ಟೀಮ್:

ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಗುದ್ದು ಕೊಟ್ಟಿದ್ದಾರೆ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಗೆಲುವು ಸಿಕ್ಕ ಬಳಿಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆದಿದ್ದಾರೆ.

‘ಮತದಾರರು ಸರ್ವಾಧಿಕಾರಿ, ಕೋಮುವಾದಿ ಮತ್ತು ದುರಹಂಕಾರಿ ನಾಯಕತ್ವವನ್ನು ತಿರಸ್ಕರಿಸಿ, ಪ್ರಜಾಪ್ರಭುತ್ವವಾದಿ, ಜಾತ್ಯತೀತ ಮತ್ತು ವಿನಯವಂತ ನಾಯಕತ್ವವನ್ನು ಬೆಂಬಲಿಸಿದ್ದಾರೆ.

ಮತದಾರರಿಗೆ ಕೃತಜ್ಞತೆಗಳು, ರಾಹುಲ್‌ಜಿಗೆ ಅಭಿನಂದನೆಗಳು, ನರೇಂದ್ರ ಮೋದಿಯವರಿಗೆ ಸಹಾನುಭೂತಿಗಳು’ ಎಂದು ಕಾಲೆಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ನಡೆಸಿ, ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಅಡ್ಡಿಯಾಗಿದ್ರು. ಆ ವೇಳೆ ಪ್ರಧಾನಿ ನರೇಂದ್ರ ಮೋದಿ ಟ್ಟಿಟ್ಟರ್‌ನಲ್ಲಿ ಗೆಲುವಿನ ಕೇಕೆ ಹಾಕಿದ್ರು. ಇದೀಗ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಜನರು ಕಾಂಗ್ರೆಸ್ ಕೈ ಹಿಡಿದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕನಿಕರ ವ್ಯಕ್ತಪಡಿಸುವ ಮೂಲಕ ಸಿದ್ದರಾಮಯ್ಯ, ಟ್ವಿಟ್ಟರ್‌ನಲ್ಲೇ ಟಾಂಗ್ ಕೊಟ್ಟಿದ್ದಾರೆ.

Leave a Reply