ಮೇಕೆದಾಟು, ಮಹದಾಯಿ ಯೋಜನೆ: ದಿಲ್ಲಿಯಲ್ಲಿ ಕರ್ನಾಟಕ ಸಂಸದರ ಪ್ರದರ್ಶನ

ಡಿಜಿಟಲ್ ಕನ್ನಡ ಟೀಮ್:

ಮೇಕೆದಾಟು ಹಾಗೂ ಮಹದಾಯಿ ಯೋಜನೆ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ಕರ್ನಾಟಕದ ಸಂಸದರು ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಗುರುವಾರ ಪ್ರದರ್ಶನ ನಡೆಸಿದ್ದಾರೆ.

ವಿದ್ಯುತ್ ಉತ್ಪಾದನೆ ಹಾಗೂ ಕುಡಿಯುವ ನೀರು ಪೂರೈಕೆ ಉದ್ದೇಶದ ಈ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಈ ಮೂಲಕ ರಾಜ್ಯದ ಎಲ್ಲ ಸಂಸದರು ಪಕ್ಷಭೇದ ಮರೆತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಅನಗತ್ಯವಾಗಿ ತಗಾದೆ ತೆಗೆಯುತ್ತಿದೆ. ರಾಜಕೀಯ ಕಾರಣಕ್ಕಾಗಿ ಈ ವಿಚಾರವನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂಬುದು ರಾಜ್ಯ ಸಂಸದರ ಇಂಗಿತ.

ರಾಜ್ಯದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಸಂಘಟಿಸಿರುವ ಈ ಪ್ರದರ್ಶನದಲ್ಲಿ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುತ್ತಿರುವ ಡಿ.ವಿ. ಸದಾನಂದಗೌಡ, ಅನಂತಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ ಸೇರಿದಂತೆ ಎಲ್ಲ ಸಂಸದರು ಭಾಗವಹಿಸಿದ್ದಾರೆ.

ಕಾಂಗ್ರೆಸ್ ನ ಡಿ.ಕೆ ಸುರೇಶ್, ಬಿ .ಕೆ ಹರಿಪ್ರಸಾದ್, ಜೈರಾಮ್ ರಮೇಶ್, ಬಿಜೆಪಿಯ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಷಿ, ಬಿ.ವೈ ರಾಘವೇಂದ್ರ ಮತ್ತಿತರರ ಸಂಸದರು ಇದ್ದರು.

 

Leave a Reply