ಪ್ರಧಾನಿ ಹುದ್ದೆಗೆ ಮಮತಾ ಸೂಕ್ತ ಅಭ್ಯರ್ಥಿ ಅಂತಾ ಹೇಳಿದ್ರು ಬಿಜೆಪಿ ರಾಜ್ಯಾಧ್ಯಕ್ಷ!

ಡಿಜಿಟಲ್ ಕನ್ನಡ ಟೀಮ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನ ಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ನಿರಂತರ ವಾಗ್ದಾಳಿ ಮಾಡುತ್ತಾ ಕೇಂದ್ರ ಸರ್ಕಾರಕ್ಕೆ ಪ್ರಮುಖ ರಾಜಕೀಯ ಎದುರಾಳಿಯಾಗಿರುವ ಮಮತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರೇ ಪ್ರಧಾನಿ ಅಭ್ಯರ್ಥಿ ಎಂದು ಹೇಳಿರುವುದು ಸಹಜವಾಗಿ ಹುಬ್ಬೇರುವಂತೆ ಮಾಡಿದೆ.

ಬಿಜೆಪಿಯ ರಥ ಯಾತ್ರೆಗೆ ಪಶ್ಚಿಮ ಬಂಗಾಳದಲ್ಲಿ ಅವಕಾಶ ನೀಡದೇ ಸವಾಲೆಸೆದಿರುವ ದೀದಿಯನ್ನು ಈ ಮಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಹೊಗಳಲು ಕಾರಣ ಏನು? ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತದೆ.

ಮಮತಾ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಕೊರಿರುವ ದಿಲೀಪ್ ಅವರು ಹೇಳಿದ್ದಿಷ್ಟು…, ‘ಮಮತಾ ಬ್ಯಾನರ್ಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇಶದ ಪ್ರಧಾನಿಯಾಗುವ ಕನಸು ಕಾಣುತ್ತಿರುವ ಅವರಿಗೆ ಶುಭ ಕೋರುತ್ತೇನೆ. ಈ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಜ್ಯೋತಿ ಬಸು ಅವರು ಕೂಡ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದರು. ಆದರೆ ಅವರ ಪಕ್ಷವೇ ಅವರನ್ನು ಪ್ರಧಾನಿ ಸ್ಥಾನಕ್ಕೆ ಏರಲು ಬಿಡಲಿಲ್ಲ. ಈಗ ಪಶ್ಚಿಮ ಬಂಗಾಳದಿಂದ ಯಾರನ್ನಾದರೂ ಪ್ರಧಾನಿಯನ್ನಾಗಿ ಮಾಡುವುದಾದರೆ ಅದಕ್ಕೆ ಮಮತಾ ಬ್ಯಾನರ್ಜಿ ಅವರೇ ಸೂಕ್ತ ಅಭ್ಯರ್ಥಿ.’

Leave a Reply